ವಂಚಿಸುತ್ತಿದ್ದ ವ್ಯಕ್ತಿ ಸೆರೆ; ಮೆಚ್ಚುಗೆ
ಚಿಕ್ಕಬಳ್ಳಾಪುರ: ಭಾರತೀಯ ಥ್ರೋಬಾಲ್ ಫೆಡರೇಷನ್‌ನ ಮಹಾಕಾರ್ಯದರ್ಶಿಯೆಂದು ಹೇಳಿಕೊಂಡು ಕ್ರೀಡಾಪಟುಗಳಿಂದ ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿಯನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿರುವುದಕ್ಕೆ ಕರ್ನಾಟಕ ಥ್ರೋಬಾಲ್ ಅಸೊಸಿಯೇಷನ್ ಸಂಸ್ಥೆ ಕಾರ್ಯದರ್ಶಿ ಹೆನ್ರಿ ಪ್ರಸನ್ನ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಎಂಬುವವರನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದು, ಹಿಂದಿನಿಂದಲೂ ಶ್ರೀಮಂತ ಕ್ರೀಡಾ ಪಟುಗಳಿಂದ ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಾಗಿ ನಂಬಿಸಿ ಆರೋಪಿ ಲಕ್ಷಾಂತರ ರೂಪಾಯಿಗಳನ್ನು ವಸೂಲಿ ಮಾಡುತ್ತಿದ್ದ. ಅಲ್ಲದೇ ಅವರ ಪಾಸ್ ಪೋರ್ಟ್ ಹಾಗೂ ಇನ್ನಿತರ ದಾಖಲೆಗಳನ್ನು ತಮ್ಮ ವಶಕ್ಕೆ ತೆಗೆದುಕೊಳ್ಳುತ್ತಿದ್ದ. ಈ ಸಂಬಂಧ ಹಲವಾರು ಬಾರಿ ಪೊಲೀಸರ ಗಮನಕ್ಕೆ ತಂದಿದ್ದರೂ ಸಹ ಯಾವುದೇ ಪ್ರಯೋಜನವಾಗಿರಲಿಲ್ಲ. ಆದರೆ, ಇತ್ತೀಚೆಗೆ ರಾಮಣ್ಣ ಅಕ್ರಮಗಳ ಬಗ್ಗೆ ಉಮೇಶ್ ಗೊಯೆಲ್ ಮತ್ತು ರಾಜೇಶ್ ಶರ್ಮಾ ಉತ್ತರ ಪ್ರದೇಶದ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ಇದೀಗ ಪೊಲೀಸರು ರಾಮಣ್ಣನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಸಾರ್ವಜನಿಕರು ಇಂತಹ ವ್ಯಕ್ತಿಗಳ ಮಾತಿಗೆ ಮರುಳಾಗಿ ಮೋಸ ಹೋಗಬಾರದೆಂದು ಮನವಿ ಮಾಡಿದ್ದಾರೆ.
ಯಂತ್ರ ವಿತರಣೆ ನಾಳೆ
ಚಿಕ್ಕಬಳ್ಳಾಪುರ: ನಗರದ ಪಶು ಆಸ್ಪತ್ರೆಯ ಆವರಣದಲ್ಲಿ ಜು.12 ರಂದು ಮಧ್ಯಾಹ್ನ 12 ಗಂಟೆಗೆ ಆಯ್ದ 52 ಫಲಾನುಭವಿಗಳಿಗೆ ಉಚಿತ ಮೇವು ಕತ್ತರಿಸುವ ಯಂತ್ರಗಳು ಹಾಗೂ ತಲಾ 10 ಗಿರಿರಾಜಕೋಳಿ ಮರಿಗಳ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಧ್ಯಕ್ಷತೆಯನ್ನು ಶಾಸಕ ಡಾ. ಕೆ. ಸುಧಾಕರ್ ವಹಿಸಲಿದ್ದಾರೆ.
ಕೆಡಿಪಿ ಸಭೆ ಇಂದು
ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜು.11 ರಂದು ಬೆಳಗ್ಗೆ 11 ಗಂಟೆಗೆ ಕೆಡಿಪಿ ಸಭೆಯನ್ನು ಏರ್ಪಡಿಸಲಾಗಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.