ವಿದ್ಯಾರ್ಥಿಗಳ ಸಮ್ಮುಖದಲ್ಲಿ ಹುಟ್ಟುಹಬ್ಬ
ಚಿಂತಾಮಣಿ: ಶಾಲಾ ವಿದ್ಯಾರ್ಥಿಗಳ ಜೊತೆ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವುದು ತುಂಬಾ ಸಂತೋಷವಾಗುತ್ತದೆ ಎಂದು ಶಿಕ್ಷಕ ಆರ್. ವೆಂಕಟರಮಣಾ ರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಪಿಲ್ಟರ್ ಬೆಡ್ ಬಳಿ ಇರುವ ಸರ್ಕಾರಿ ನೂತನ ಪ್ರೌಢಶಾಲೆ ಆವರಣದಲ್ಲಿ ಶಾಲೆಯ ಹಿರಿಯ ಶಿಕ್ಷಕ ಆರ್. ವೆಂಕಟರಮಣಾರೆಡ್ಡಿ ತಮ್ಮ 50ನೇ ಹುಟ್ಟುಹಬ್ಬವನ್ನು ಶಾಲಾ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಸಿಹಿ ಹಂಚುವ ಮೂಲಕ ಸರಳವಾಗಿ ಆಚರಿಸಿಕೊಂಡು ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ನೂರಾರು ಬಡ ವಿದ್ಯಾರ್ಥಿಗಳ ಸಮ್ಮುಖದಲ್ಲಿ ವಿದ್ಯಾರ್ಥಿಗಳಿಗೆ ಲಾಡು ಹಂಚುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡರು. ವಿದ್ಯಾರ್ಥಿಗಳು ಶುಭಾಶಯ ಕೋರಿದರು. ಇದೇ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಮಂಜುಳಮ್ಮ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಚ್. ಮಂಜುನಾಥ್, ಶಿಕ್ಷಕರಾದ ಓಂಕಾರಪ್ಪ, ಅಪ್ಪೋಜಿ ರೆಡ್ಡಿ, ರಾಮಚಂದ್ರ ಸಿಂಗ್, ಎಂ. ರಾಜಣ್ಣ, ಭಾನುಪ್ರಕಾಶ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಸಭೆಯಲ್ಲಿ ಭಾಗವಹಿಸಿದ್ದರು.