ವಿಶ್ವ ಜನಸಂಖ್ಯಾ ದಿನಾಚರಣೆ ಇಂದು
ಕೋಲಾರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿಶ್ವ ಜನಸಂಖ್ಯಾ ದಿನಾಚರಣೆ, ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಮತ್ತು ಡೆಂಘಿ ವಿರೋಧಿ ಮಾಸಾಚರಣೆಯನ್ನು ಜು.11ರಂದು ಜಂಟಿಯಾಗಿ ನಗರದ ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜಕುಮಾರ್ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮಾಸಾಚರಣೆ ಅಂಗವಾಗಿ ಬೆಳಗ್ಗೆ ನಗರದ ಪ್ರವಾಸಿ ಮಂದಿರದಿಂದ ಜಾಥಾ ಹಮ್ಮಿಕೊಳ್ಳಲಾಗಿದ್ದು, ಶಾಸಕ ವರ್ತೂರು ಪ್ರಕಾಶ್ ಚಾಲನೆ ನೀಡಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿಪಂ ಪ್ರಭಾರ ಅಧ್ಯಕ್ಷ ನಾಗರಾಜ್ ನೆರವೇರಿಸಲಿದ್ದು, ಶಾಸಕ ವರ್ತೂರು ಪ್ರಕಾಶ್ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅತಿ ಹೆಚ್ಚು ರಕ್ತದಾನ ಮಾಡಿದ ಮಧು, ರಘುಪ್ರಸಾದ್, ಪ್ರಶಾಂತ್ ಅವರನ್ನು ಸನ್ಮಾನಿಸಲಾಗುವುದು. ಅದೇ ರೀತಿ ಮಾಸಾಚರಣೆ ಸಂಬಂಧವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಸೂರ್ಪಿ ಪರ್ವಿನ್, ಸಯಿರಾ ಪರೀನ್, ವಿನುಶ್ರೀಗೆ ಪಾರಿತೋಷಕ ನೀಡಲಾಗುವುದೆಂದರು.