ಮೋಹನ್ ತಾಪಂ ಅಧ್ಯಕ್ಷ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಪಂ ಅಧ್ಯಕ್ಷರಾಗಿ ಪಿ.ಎ.ಮೋಹನ್(ಪಟ್ರೇನಹಳ್ಳಿ ಕ್ಷೇತ್ರ) ಮತ್ತು ಉಪಾಧ್ಯಕ್ಷರಾಗಿ ಕೆ.ವಿ.ಪ್ರೇಮಾ(ಪೋಶೆಟ್ಟಿಹಳ್ಳಿ ಕ್ಷೇತ್ರ) ಅವಿರೋಧವಾಗಿ ಆಯ್ಕೆಯಾದರು. ಈ ಮೂಲಕ ಅಧ್ಯಕ್ಷ ಸ್ಥಾನ ಜೆಡಿಎಸ್ ಮತ್ತು ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾಗಿದೆ. ನಗರದಲ್ಲಿರುವ ತಾಪಂ ಸಭಾಂಗಣದಲ್ಲಿ ಶುಕ್ರವಾರ ಉಪ ವಿಭಾಗಾಧಿಕಾರಿ ಶಾಂತಲಾ ನೇತೃತ್ವದಲ್ಲಿ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿತ್ತು.