ಶಾಲೆಯಲ್ಲಿ ರಾಜಕೀಯ ಬೆರೆಸಬೇಡಿ
ಸರ್ಕಾರಿ ಶಾಲೆಯಲ್ಲಿ ರಾಜಕೀಯ ಬೆರೆಸಿ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವ ಒಂದು ಗುಂಪಿನ ಕಡೆಯಿಂದ ಶೈಕ್ಷಣಿಕ ಅಭಿವೃದ್ಧಿ ಕುಂಠಿತವಾಗಿ ಮಕ್ಕಳ ಸಂಖ್ಯೆ ಇಳಿಮುಖವಾಗಿದೆಯೆಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರ ಹೊರ ವಲಯದ ಕಟಮಾಚನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಗ್ರಾಮದ ಹಲವರು ವಿನಾಕಾರಣ ಶಾಲೆ ವಿಷಯದಲ್ಲಿ ರಾಜಕೀಯ ಬೆರೆಸಿ ಶಿಕ್ಷಕರ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಇದು ಸರಿಯಲ್ಲ. ಮಕ್ಕಳಿಗೆ ಅಕ್ಷರ ನೀಡುವ ಶಾಲೆಯಲ್ಲೂ ರಾಜಕೀಯ ಮಾಡಬೇಡಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಮಕ್ಕಳಿಗೆ ಮಧ್ಯಾಹ್ನದ ವೇಳೆ ಬಿಸಿಯೂಟ ತಯಾರು ಮಾಡುವ ವಿಷಯದಲ್ಲಿ ಹಲವರು ಜಾತಿ ಜಾತಿಗಳ ನಡುವೆ ಭಿನ್ನಾಭಿಪ್ರಾಯ ತಂದು ಗ್ರಾಮದ ಸರ್ಕಾರಿ ಶಾಲೆ ಶೈಕ್ಷಣಿಕ ಅಭಿವೃದ್ಧಿಗೆ ಮಾರಕವಾಗುತ್ತಿದೆ.
ಆಂಜಪ್ಪ
ಎಸ್ಡಿಎಂಸಿ ಮಾಜಿ ಅಧ್ಯಕ್ಷ ಪೋಷಕ