ಸಮರ್ಪಕ ಗ್ಯಾಸ್ ವಿತರಣೆಗೆ ಆಗ್ರಹ
ಶಿಡ್ಲಘಟ್ಟ: ತಾಲೂಕಿನಾದ್ಯಂತ ಗ್ಯಾಸ್ ಸಿಲಿಂಡರ್ ವಿತರಣೆ ಸಮರ್ಪಕವಾಗಿ ಆಗುತ್ತಿಲ್ಲವೆಂದು ರೈತ ಸಂಘದ ಜಿಲ್ಲಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಆರೋಪಿಸಿದರು.
ವಿತರಣೆಯಲ್ಲಿ ಆಗುತ್ತಿರುವ ಲೋಪದೋಷಗಳ ನಿವಾರಣೆ ಸಭೆಯಲ್ಲಿ ಮಾತನಾಡಿ, ತಾಲೂಕಿನ ಏಕೈಕ ಗ್ಯಾಸ್ ಏಜೆನ್ಸಿ ಇಂಡೇನ್ ಕಂಪನಿಯಿಂದ ಗ್ರಾಹಕರಿಗೆ ನಿಗದಿತ ಸಮಯದಲ್ಲಿ ಸಿಲಿಂಡರ್ ಲಭ್ಯವಾಗುತ್ತಿಲ್ಲ, ಗ್ರಾಹಕರ ಮನೆಬಾಗಿಲಿಗೆ ಸಿಲಿಂಡರ್ ತಲುಪಿಸಬೇಕು ಎಂದು ಒತ್ತಾಯ ಮಾಡಿದರು. ಇದಕ್ಕೆ ಉತ್ತರಿಸಿದ ಇಂಡೇನ್ ಗ್ಯಾಸ್ ವ್ಯವಸ್ಥಾಪಕ ಮುರಳಿ,ಮುಂದಿನ ದಿನಗಳಲ್ಲಿ ಗ್ರಾಹಕರ ಮನೆಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡುವುದಾಗಿ ಹೇಳಿದರು.ತಹಸೀಲ್ದಾರ್ ಜಿ.ಎ. ನಾರಾಯಣಸ್ವಾಮಿ ಇದ್ದರು.