ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕಾರ್ಮಿಕರ ಮಕ್ಕಳಿಗೆ ಸೌಲಭ್ಯ ನೀಡದ ಸರ್ಕಾರ

Rashmi Kasaragodu
Updated On : 13 Jul 2014, 1:41 am

ಕೆಜಿಎಫ್: ದೇಶಕ್ಕೆ ಚಿನ್ನ ಕೊಟ್ಟ ಬಿಜಿಎಂಎಲ್ ಕಾರ್ಮಿಕರ ಮಕ್ಕಳಿಗೆ ಸರ್ಕಾರ ಮೂಲ ಸೌಲಭ್ಯ ಒದಗಿಸಲು ವಿಫಲವಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಮೇಡಿಹಾಳ ರಾಘವೇಂದ್ರ ಹೇಳಿದರು.
ಕರವೇ ವತಿಯಿಂದ ಬಿಜಿಎಂಎಲ್ ಚಿನ್ನದ ಗಣಿ ಪ್ರದೇಶದ ಎಂಇಎಲ್‌ಐಎಂ ಅನುದಾನ ರಹಿತ ಪ್ರಾಥಮಿಕ ಶಾಲೆಯ ಬಡ ಮಕ್ಕಳಿಗೆ ಉಚಿತವಾಗಿ ಶೂ ಮತ್ತು ಚಪ್ಪಲಿ ವಿತರಿಸಿ ಮಾತನಾಡಿ, ಕೆಜಿಎಫ್‌ನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಲು ಸರ್ಕಾರ ಮೀನಮೇಷ ಮಾಡುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ರೈಲ್ವೆ ಸಚಿವ ಡಿ.ವಿ. ಸದಾನಂದಗೌಡರನ್ನು ಭೇಟಿ ಮಾಡಿ ಒತ್ತಾಯಿಸುವುದಾಗಿ ತಿಳಿಸಿದರು. ನಂತರ ಶಾಲೆಯ 106 ಬಡ ಮಕ್ಕಳಿಗೆ ಶೂ ಮತ್ತು ಚಪ್ಪಲಿಗಳನ್ನು ವಿತರಿಸಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಶಾಲೆಯ ಮುಖ್ಯಸ್ಥ ಸ್ಯಾಮುವೆಲ್ ಮಾತನಾಡಿದರು. ತಾಲೂಕು ಅಧ್ಯಕ್ಷ ನಂಜುಂಡಪ್ಪ, ಪಲ್ಲವಿ, ಪ್ರಭಾಕರ್, ಕಲ್ಪನ, ಲಕ್ಷ್ಮಮ್ಮ, ನಾಗರಾಜ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement