ಚುನಾವಣೆಯಲ್ಲಿ ಭಾಗವಹಿಸದಿರಲು ಮನವಿ
ಚಿಂತಾಮಣಿ: ಕರ್ನಾಟಕ ರಾಜ್ಯ ಬಡ್ತಿ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಂಘದ ಹಾಗೂ ವಿವಿಧ ಬೇಡಿಕೆಗಳ ಹಿತದೃಷ್ಟಿಯಿಂದ ಪ್ರಸ್ತುತ ನಡೆಯುತ್ತಿರುವ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಬಡ್ತಿ ಶಿಕ್ಷಕರು ಚುನಾವಣೆಯಲ್ಲಿ ಭಾಗವಹಿಸಬಾರದೆಂದು ಅಧ್ಯಕ್ಷ ಕೆ.ಬಿ. ಯಲ್ಲಪ್ಪ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಬಡ್ತಿ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಂಘದ ಹಾಗೂ ವಿವಿಧ ಬೇಡಿಕೆಗಳ ಹಿತದೃಷ್ಟಿಯಿಂದ ಪ್ರಸ್ತುತ ನಡೆಯುತ್ತಿರುವ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಬಡ್ತಿ ಶಿಕ್ಷಕ ಸಹೋದರ ಹಾಗೂ ಸಹೋದರಿಯರು ಭಾಗವಹಿಸಬಾರದೆಂದು ಕೇಂದ್ರ ಸಂಘದ ರಾಜ್ಯಾಧ್ಯಕ್ಷ ಕೆ.ಬಿ. ಯಲ್ಲಪ್ಪ, ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷ ಸಿ.ಎ. ನಾರಾಯಣ ಸ್ವಾಮಿ ಹಾಗೂ ಕೇಂದ್ರ ಸಂಘದ ಸಹ ಕಾರ್ಯದರ್ಶಿ ದೇವರಾಜ್ ಪ್ರಕಟಣೆಯಲ್ಲಿ ಕೋರಿದ್ದಾರೆ.