ಪಾದಯಾತ್ರೆ ನಾಳೆ
ಮಂಡ್ಯ: ಕಡಿಮೆ ಸಂಖ್ಯೆಯಲ್ಲಿರುವ 1995ರ ನಂತರ ಕನ್ನಡ ಮಾಧ್ಯಮ ಅನುದಾನ ರಹಿತ ಶಾಲಾ-ಕಾಲೇಜುಗಳನ್ನು ಅನುದಾನ ಸಂಹಿತೆಗೆ ಒಳಪಡಿಸುವಂತೆ ಒತ್ತಾಯಿಸಿ ರಾಜ್ಯ ಅನುದಾನ ರಹಿತ ಶಾಲಾ-ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟ ಜು.14 ರಿಂದ ಜು.17ರವರೆಗೆ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಂಡಿದೆ.
ಮದ್ದೂರು ತಾಲೂಕಿನ ಶಿವಪುರ ಧ್ವಜ ಸತ್ಯಾಗ್ರಹ ಸೌಧದಿಂದ ಬೆಂಗಳೂರಿನ ವಿಧಾನಸೌಧದವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳ ಖಾಸಗಿ ಅನುದಾನ ರಹಿತ ಶಾಲಾ-ಕಾಲೇಜುಗಳ ನೌಕರರು, ವಿದ್ಯಾರ್ಥಿಗಳು ಹಾಗೂ ಕನ್ನಡಪರ ಸಂಘಟನೆಗಳು ಸೇರಿ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಗೌರವಾಧ್ಯಕ್ಷ ಜಾಲಮಂಗಲ ನಾಗರಾಜು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನಾಲ್ಕು ದಿನಗಳ ಕಾಲ ನಡೆಯುವ ಈ ಪಾದಯಾತ್ರೆಯಲ್ಲಿ ಭಾಗವಹಿಸುವ ಎಲ್ಲಾ ನೌಕರರು, ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳಿಗೆ ರಜೆ ನೀಡುವ ಮೂಲಕ ಯಶಸ್ವಿಗೊಳಿಸಬೇಕೆಂದು ಅನುದಾನರಹಿತ ಶಾಲಾ-ಕಾಲೇಜುಗಳನ್ನು ಒಕ್ಕೂಟ ಮನವಿ ಮಾಡಿದೆ ಎಂದು ಹೇಳಿದರು.