ಸಾಯಿ ಮಂದಿರದಲ್ಲಿ ಅದ್ಧೂರಿ ಗುರು ಪೌರ್ಣಿಮೆ
ಕೋಲಾರ: ಗುರು ಪೌರ್ಣಿಮೆ ಅಂಗವಾಗಿ ನಗರದ ಶಿರಡಿ ಸಾಯಿ ಬಾಬಾ ಮಂದಿರದಲ್ಲಿ ಶನಿವಾರ ವಿಶೇಷ ಪೂಜೆ ನಡೆಯಿತು.
ಸಂಸದ ಕೆ.ಎಚ್. ಮುನಿಯಪ್ಪ ತಮ್ಮ ಪತ್ನಿಯೊಂದಿಗೆ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬೆಳಿಗ್ಗೆಯಿಂದಲೇ ಸಾವಿರಾರು ಭಕ್ತರು ಸರದಿ ಸಾಲಿನಲ್ಲಿ ನಿಂತು ಸಾಯಿಬಾಬಾ ದರ್ಶನ ಪಡೆದರು. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಸುಮಾರು 10 ಸಾವಿರ ಜನರಿಗೆ ಅನ್ನದಾನ ವ್ಯವಸ್ಥೆ ಮಾಡಿದ್ದರು. ಸಾಯಿ ಮಂದಿರದ ಟ್ರಸ್ಟ್ ಅಧ್ಯಕ್ಷ ಜಿ.ಪಿ. ಮುನಿಸ್ವಾಮಿ, ಪದಾಧಿಕಾರಿಗಳು ಭಕ್ತರಿಗೆ ನೀರು, ನೆರಳಿನ ವ್ಯವಸ್ಥೆ ಕಲ್ಪಿಸಿದ್ದರು.