ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ನೆಹರು ಯುವ ಕೇಂದ್ರಕ್ಕೆ ಸ್ವಂತ ಕಟ್ಟಡವೇ ಇಲ್ಲ!

Srinivasa Murthy VN
Updated On : 15 Jul 2014, 1:11 am

- ಪಾ.ಶ್ರೀ.ಅನಂತರಾಮ್
ಕೋಲಾರ: ಕೇಂದ್ರ ಸರ್ಕಾರದ ನೆಹರು ಯುವ ಕೇಂದ್ರ ಕಳೆದ 28 ವರ್ಷಗಳಿಂದ ಕೋಲಾರ ಜಿಲ್ಲಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದರೂ ಸ್ವಂತ ಕಟ್ಟಡ ನಿರ್ಮಾಣ ಸಾಧ್ಯವಾಗಿಲ್ಲ.
1986ರಿಂದಲೂ ನೆಹರು ಯುವ ಕೇಂದ್ರ ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಪ್ರತಿ ತಿಂಗಳು 6 ಸಾವಿರ ಬಾಡಿಗೆ ಪಾವತಿಸಲಾಗುತ್ತಿದೆ. ಇಪ್ಪತ್ತೆಂಟು ವರ್ಷಗಳಿಂದ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಿವೇಶನ ಕೋರಿ ನಗರಸಭೆ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ತಾಲೂಕು ಕಂದಾಯ ಇಲಾಖೆಗೆ ಹತ್ತಾರು ಅರ್ಜಿ ಸಲ್ಲಿಸಿ, 30್ಢ40 ಅಳತೆಯ ನಿವೇಶನ ಮಂಜೂರು ಮಾಡುವಂತೆ ಕೇಳಿಕೊಂಡಿದೆ. ಈ ಹಿಂದಿನ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಮನವಿ ಸಲ್ಲಿಸಲಾಗಿದೆ. ಹಾಲಿ ಜಿಲ್ಲಾಧಿಕಾರಿ ಡಿ.ಕೆ.ರವಿ ಅವರಿಗೂ ಜು.14ರಂದು ನಡೆದ ಜಿಲ್ಲಾ ಸಲಹಾ ಸಮಿತಿಯ ಸಭೆಯಲ್ಲಿ ಮನವಿ ಮಾಡಲಾಗಿದೆ.
ಈಗಾಗಲೇ ನಗರದ ಕೆಲವು ಕಡೆ ಸರ್ಕಾರಿ ಭೂಮಿಯನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುವ ನೆಹರು ಯುವ ಕೇಂದ್ರದ ಜಿಲ್ಲಾ ಸಲಹಾ ಸಮಿತಿಯ ಅಧ್ಯಕ್ಷರೂ ಆಗಿರುವ ಡಿ.ಕೆ.ರವಿ ಅವರು, ನೆಹರು ಯುವ ಕೇಂದ್ರಕ್ಕೆ ನಿವೇಶನ ಮಂಜೂರು ಮಾಡಿಸಿ ಸರ್ಕಾರಕ್ಕೆ ಆಗುತ್ತಿರುವ ನಷ್ಟ ತಪ್ಪಿಸುತ್ತಾರೆಂಬ ಭರವಸೆಯನ್ನು ಜಿಲ್ಲಾ ಯುವ ಸಮನ್ವಯಾಧಿಕಾರಿ ಜಿ.ಇ.ನಾರಾಯಣಗೌಡ ವ್ಯಕ್ತಪಡಿಸಿದ್ದಾರೆ.
ಯವಕರಿಗೆ ಅನುಕೂಲ: ಕೇಂದ್ರಕ್ಕೆ ಸ್ವಂತ ಕಟ್ಟಡವಾದಲ್ಲಿ ನಿರುದ್ಯೋಗಿ ಯುವಕರಿಗೆ ತರಬೇತಿ, ಸ್ವಯಂ ಉದ್ಯೋಗಾಂಕ್ಷಿಗಳಿಗೆ ಕಾರ್ಯಾಗಾರ, ತಾಲೂಕು ಮತ್ತು ಜಿಲ್ಲಾ ಮಟ್ಟದ ಯುವಜನ ಮೇಳ, ರಾಷ್ಟ್ರೀಯ ಹಬ್ಬಗಳ ಆಚರಣೆ, ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಬರುವ ಯುವಕ ತಂಡಗಳಿಗೆ ಬೇಕಾದ ಸೌಕರ್ಯ ಕಲ್ಪಿಸಲು ಅನುಕೂಲವಾಗುತ್ತದೆ ಎಂದು ಜಿ.ಇ.ನಾರಾಯಣಗೌಡರು ಪ್ರತಿಪಾದಿಸಿದ್ದಾರೆ.
10 ಲಕ್ಷ ಹಣವಿದೆ: ಕೋಲಾರದಲ್ಲಿ ನೆಹರು ಯುವ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರ 10 ಲಕ್ಷ ಬಿಡುಗಡೆ ಮಾಡಿದೆ. ಕೋಲಾರ ಸಂಸದ ಮುನಿಯಪ್ಪ ಅವರು 10 ಲಕ್ಷ ತಮ್ಮ ಕ್ಷೇತ್ರಾಭಿವೃದ್ಧಿ ನಿಧಿಯಿಂದ ಕೊಡಲು ಸಮ್ಮತಿಸಿದ್ದಾರೆ. ನಿವೇಶನ ಸಿಕ್ಕಿದ ಕೂಡಲೇ ವಿವಿಧ ಸಂಘ ಸಂಸ್ಥೆಗಳು, ದಾನಿಗಳಿಂದ ಹಾಗೂ ಶಾಸಕರ ನಿಧಿಯಿಂದ ಹಣ ಸಂಗ್ರಹಿಸಿ ಕಟ್ಟಡ ನಿರ್ಮಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸಿದ್ಧರಿದ್ದಾರೆ. ಒಟ್ಟಿನಲ್ಲಿ ನಿವೇಶನ ದೊರೆತರೆ ಯುವ ಕೇಂದ್ರಕ್ಕೆ ಸ್ವಂತ ಕಟ್ಟಡ ಸಾಧ್ಯವಾಗಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement