ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಪ್ರವಾಸದಿಂದ ಮಕ್ಕಳಿಗೆ ಅನುಕೂಲ

Srinivasa Murthy VN
Updated On : 15 Jul 2014, 1:12 am

ಬಾಗೇಪಲ್ಲಿ: ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಶೈಕ್ಷಣಿಕ ಪ್ರವಾಸದಿಂದಲ್ಲೂ ಸಹ ಅನುಕೂಲವಾಗುತ್ತದೆ ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅಭಿಪ್ರಾಯಪಟ್ಟರು.
ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಅವರಣದಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ಸಾರ್ವಜನಿಕ ಶಿಕ್ಷಣ  ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತವಾಗಿ ಕೈಗೊಂಡ ಕರ್ನಾಟಕ ದರ್ಶನ ಯೋಜನೆಯಲ್ಲಿ ಐದು ದಿನಗಳ ಶೈಕ್ಷಣಿಕ ಪ್ರವಾಸದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ತಮ್ಮ 5 ದಿನಗಳ ಶೈಕ್ಷಣಿಕ ಪ್ರವಾಸದಲ್ಲಿ ಹೆಚ್ಚಿನ ಜ್ಞಾನವನ್ನು ಸಂಪಾದಿಸಿಕೊಳ್ಳಬೇಕು ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ವೆಂಕಟೇಶ್  ಮಾತನಾಡಿ, ತಾಲೂಕಿನ 20 ಶಾಲೆಗಳಿಂದ ಒಟ್ಟು 200 ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸ ತೆರಳುತ್ತಿದ್ದಾರೆ. ಈ ಪ್ರವಾಸದ ಖರ್ಚು ವೆಚ್ಚಗಳನ್ನು ಸಂಪೂರ್ಣವಾಗಿ ಇಲಾಖೆಯೇ ಬರಿಸಲಿದೆ ಮತ್ತು ಇಲಾಖೆ ವತಿಯಿಂದ ಒಬ್ಬ ವಿದ್ಯಾರ್ಥಿಗೆ 12 ರೀತಿಯ ಸಲಕರಣೆಗಳನ್ನು ನೀಡಲಾಗಿದೆ. ಉತ್ತರ ಕನ್ನಡ  ಬಿಜಾಪುರ, ಬೆಳಗಾಂ, ಚಿತ್ರದುರ್ಗ ಮುಂತಾದ ಕಡೆ ಪ್ರವಾಸ ಕೈಗೊಳ್ಳುವ ವ್ಯವಸ್ಥೆ ಮಾಡಲಾಗಿದೆ ಎಂದರು. ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಉಪಾಧ್ಯಕ್ಷೆ ಸಾವಿತ್ರಮ್ಮ, ಬಿ.ಆರ್.ಸಿ ರಮೇಶ್, ದೈಹಿಕ ಶಿಕ್ಷಕ ನಟರಾಜ್  ಸೇರಿದಂತೆ ಶಿಕ್ಷಕರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement