ಮೂಲ ಸೌಕರ್ಯ ಕಲ್ಪಿಸಿ
ಶಿಡ್ಲಘಟ್ಟ: ಪದವಿ ಪೂರ್ವ ಕಾಲೇಜಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಒತ್ತಾಯಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಕೆಗೆ ಪೂರಕವಾಗಿರುವ ವಾತಾವರಣವಿಲ್ಲ. ಕುಡಿಯುವ ನೀರು, ಶೌಚಾಲಯ, ಕಾಂಪೌಂಡಿನ ವ್ಯವಸ್ಥೆಯಿಲ್ಲದೆ ಪ್ರತಿನಿತ್ಯ ನರಕ ಯಾತನೆ ಅನುಭವಿಸುವಂತಾಗಿದೆ. ಕಾಲೇಜಿನ ಆವರಣದಲ್ಲೆ ಮಲಮೂತ್ರ ವಿಸರ್ಜನೆ ಮಾಡಿರುತ್ತಾರೆ. ಕಾಲೇಜು ಅನೈತಿಕ ಚಟುವಟಿಕೆಗಳ ತಾಣವಾಗಿದೆ.
ಪ್ರತಿನಿತ್ಯ ಪಾಠಗಳು ನಡೆಯುವ ವೇಳೆಯಲ್ಲಿ ಕೆಲವು ಮಂದಿ ಕಿಡಿಗೇಡಿಗಳು ದ್ವಿಚಕ್ರ ವಾಹನಗಳಲ್ಲಿ ಬಂದು ವಿನಾಕಾರಣ ಶಬ್ದಮಾಡಿ, ನಮಗೆ ತೊಂದರೆ ನೀಡುತ್ತಿದ್ದಾರೆ ಈ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳು ಸೂಕ್ತ ಕ್ರಮ ಜರುಗಿಸಬೇಕು ಎಂದು ಆರೋಪಿಸಿ ವಿದ್ಯಾರ್ಥಿಗಳು ಶಾಸಕ ಎಂ.ರಾಜಣ್ಣ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮನವಿ ಸ್ವೀಕರಿಸಿದ ಶಾಸಕ ಎಂ.ರಾಜಣ್ಣ, ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು.
ಕುಂದಲಗುಕರ್ ಮುನೀಂದ್ರ, ಬಂಕ್ ಮುನಿಯಪ್ಪ, ಅಪ್ಸರಾ ಪಾಷ, ಎಇಇ ಜಮೀರ್ ಅಹ್ಮದ್ ಸೇರಿದಂತೆ ಅನೇಕರು ಈ ವೇಳೆ ಹಾಜರಿದ್ದರು.