ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಪತ್ರಕರ್ತರು ಸ್ವಯಂ ಸಂಹಿತೆ ರೂಪಿಸಿಕೊಳ್ಳಲಿ

Vishwanath S
Updated On : 16 Jul 2014, 1:07 am

ಮಾಲೂರು: ನೈತಿಕತೆ ಮೂಲಕ ಸಮಾಜದಲ್ಲಿ ಗೌರವ ಸಂಪಾದಿಸಬೇಕಾಗಿದ್ದ ಪತ್ರಿಕಾರಂಗವು ಅದರಿಂದ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿರುವುದು ಬೇಸರ ಸಂಗತಿ ಎಂದು ಕಾರ್ಯನಿರತ ಪತ್ರಕರ್ತ ಸಂಘದ ಜಿಲ್ಲಾಧ್ಯಕ್ಷ ಬಿ.ವಿ. ಗೋಪಿನಾಥ್ ಹೇಳಿದರು.
  ಪಟ್ಟಣದ ಪತ್ರಿಕಾ ಭವನದಲ್ಲಿ ಸ್ಥಳೀಯ ಪತ್ರಕರ್ತರ ಸಂಘ ಮಂಗಳವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ನೀತಿ ಸಂಹಿತೆ ಇಲ್ಲದ ಪತ್ರಿಕಾ ರಂಗದಲ್ಲಿರುವವರು ತಮ್ಮ ಕಾರ್ಯದಲ್ಲಿ ನೈತಿಕತೆ ಉಳಿಸಿಕೊಳ್ಳುವ ಮೂಲಕ ಸ್ವಯಂ ನೀತಿ ಸಂಹಿತಿ ಅಳವಡಿಸಿಕೊಳ್ಳಬೇಕಾಗಿದೆ ಎಂದರು.
ಮಾಲೂರು ಪತ್ರಕರ್ತ ಸಂಘ ಜಿಲ್ಲೆಯಲ್ಲೇ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಅಭಿನಂದಿಸಿದ ಗೋಪಿನಾಥ್  ಪ್ರತಿಷ್ಠೆ ಇದ್ದವರಿಂದ ಸಂಘಟನೆ ಕಟ್ಟಲು ಅಸಾಧ್ಯವಾಗಿದ್ದು, ಸಂಘದ ಚಟುವಟಿಕೆಯಿಂದ ದೂರವಿರುವ ನಿಂದನೆಗಳಿಗೆ ಹೆಚ್ಚು ಮಾನ್ಯತೆ ನೀಡದೆ ನಿಮ್ಮ ಚಟುವಟಿಕೆಗಳನ್ನು ಮುಂದುವರೆಸಿ ಎಂದರು.
ಈ ಸಂದರ್ಭದಲ್ಲಿ ಪ್ತಾಸ್ತಾವಿಕ ಮಾತನಾಡಿದ ಪತ್ರಕರ್ತ, ತಾ.ಪಂ. ಸದಸ್ಯ ಲೋಕೇಶ್ ತಮ್ಮ ಕ್ಷೇತ್ರದ ನಿಧಿಯಿಂದ ಪತ್ರಕರ್ತ ಭವನ ಅಭಿವೃದ್ಧಿಗೆ 50 ಸಾವಿರ ರು. ನೀಡುವುದಾಗಿ ಘೋಷಿಸಿದರು. ಕಾರ್ಯನಿರತ ಪತ್ರಕರ್ತ ಸಂಘದ ರಾಜ್ಯ ಕಾರ್ಯಕಾರಣಿ ಸದಸ್ಯ ವಾಸುದೇವ ಹೊಳ್ಳ ಮಾತನಾಡಿ ಸಂಘಕ್ಕೆ ಯಾರು ಅನಿವಾರ್ಯವಲ್ಲ. ಆದರೆ ನಮ್ಮಗೆ ಸಂಘ ಅನಿವಾರ್ಯ ಎಂಬುದನ್ನು ಪ್ರತಿಯೊಬ್ಬರು ಚಿಂತಿಸಿದಾಗ ಸಂಘ ಬೆಳೆಯಲು ಸಾಧ್ಯವಾಗುತ್ತದೆ ಎಂದರು. ಇದೇ ಸಂದರ್ಭದಲ್ಲಿ ರಾಜ್ಯ ಅಕಾಡೆಮಿ ಪ್ರಶಸ್ತಿ ಪಡೆದ ಜಿಲ್ಲಾ ಪತ್ರಕರ್ತ ಸಂಘದ ಕಾರ್ಯದರ್ಶಿ ಹಾಗೂ ಜಿಲ್ಲಾ ವರದಿಗಾರ ಗಣೇಶ್ ಹಾಗೂ ಜಿಲ್ಲಾ ಪ್ರಶಸ್ತಿ ಪಡೆದ ಹಿರಿಯ ಪತ್ರಕರ್ತ ಪಿ.ಎನ್. ದಾಸ್ ಅವರನ್ನು ಅತ್ಮೀಯವಾಗಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪತ್ರಕರ್ತ ಗಣೇಶ್ ತಾಲೂಕು ಸಂಘ ಗ್ರಾಮೀಣ ಭಾಗದ ಪತ್ರಕರ್ತರನ್ನು ಗುರ್ತಿಸಿ ಪತ್ರಿಕಾ ದಿನಾಚರಣೆ ದಿನದಂದು ಸನ್ಮಾನಿಸುವ ಪರಿಪಾಠ ಬೆಳೆಸಿಕೊಳ್ಳಬೇಕು ಎಂದರು. ತಾ.ಪಂ.ಅಧ್ಯಕ್ಷೆ ನಾಗವೇಣಿ, ಕಾರ್ಯನಿರ್ವಹಣಾಧಿಕಾರಿ ಸಂಜೀವಪ್ಪ, ಪುರಸಭೆ ಮುಖ್ಯಾಧಿಕಾರಿ ರೇಣುಕಾ, ಜಿಲ್ಲಾ ಸಂಘದ ಖಜಾಂಚಿ ಮುನಿರಾಜು, ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷ ರವೀಂದ್ರ  ಮಾತನಾಡಿದರು.ಪುರಸಭೆ ಅಧ್ಯಕ್ಷೆ ಭಾರತಮ್ಮ ನಂಜುಂಡಪ್ಪ, ಪತ್ರಕರ್ತ ಸಂಘದ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯೆ ಗೋಪಿಕಾ ಮಲ್ಲೇಶ್, ತಾ.ಪಂ. ಸದಸ್ಯ ಪುಟ್ಟಸ್ವಾಮಿ, ಹಿರಿಯ ಪತ್ರಕರ್ತ ತಮ್ಮಣ್ಣ, ಚುಟುಕು ಸಾಹಿತ್ಯ ಪರಿಷತ್ ನ ಅಧ್ಯಕ್ಷ ಕುಂ. ಚಂದ್ರಪ್ಪ, ಎಸ್.ಐ. ದಯಾನಂದ್ ಇದ್ದರು. ಟಿ.ಕೆ. ನಾಗರಾಜ್ ಪ್ರಾರ್ಥಿಸಿದರು. ರವಿ ಕುಮಾರ್ ಸ್ವಾಗತಿಸಿದರು. ರಾಜೇಂದ್ರ ವೈದ್ಯ ವಂದಿಸಿದರು.
ಚಿಕ್ಕಬಳ್ಳಾಪುರದಲ್ಲಿ ಪತ್ರಕರ್ತರ ಆಟ
ಚಿಕ್ಕಬಳ್ಳಾಪುರ: ನಗರದ ಹೊರ ವಲಯದಲ್ಲಿರುವ ಸಿವಿವಿ ಕ್ಯಾಂಪಸ್‌ನಲ್ಲಿ ಮಂಗಳವಾರ ಕೆ.ವಿ. ಮತ್ತು ಪಂಚಗಿರಿ ಶಿಕ್ಷಣ ದತ್ತಿಯಿಂದ ಪತ್ರಕರ್ತರಿಗಾಗಿ ಕ್ರೀಡಾಕೂಟ ಆಯೋಜಿಸಲಾಗಿತ್ತು.
ಪತ್ರಕರ್ತರು ನೂರು ಮೀಟರ್  ಓಟ, ಗಾಲ್ಫ್, ಹಾಕಿ, ಕ್ರಿಕೆಟ್ ಸೇರಿದಂತೆ ಮುಂತಾದ ಕ್ರೀಡೆಗಳಲ್ಲಿ ಪೈಪೋಟಿಯಲ್ಲಿ ಭಾಗವಹಿಸಿ ವಿಜೇತರಾದರು. ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಶಿಕ್ಷಣ ದತ್ತಿಯ ಅಧ್ಯಕ್ಷ ಕೆ.ವಿ. ನವೀನ್  ಕಿರಣ್, ಪತ್ರಕರ್ತರು ಸದಾ ಒತ್ತಡದಲ್ಲಿಯೇ ಕಾರ್ಯ ನಿರ್ವಹಿಸುತ್ತಾರೆ. ಸುದ್ದಿ ಸಂಗ್ರಹಣೆ ಕಾರ್ಯದಲ್ಲಿನ ಪೈಪೋಟಿಯಿಂದಾಗಿ ಹೆಚ್ಚಿನ ಸಮಯವನ್ನು ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಲು ಹಲವರಿಗೆ ಸಾಧ್ಯವಾಗುವುದಿಲ್ಲ ಎಂದ ಅವರು, ಪ್ರತಿಯೊಬ್ಬರು ಕ್ರೀಡೆಗಳಿಗೆ ಸಮಯವನ್ನು ಮೀಸಲಿಡಬೇಕು. ಕ್ರೀಡಾಕೂಟಗಳನ್ನು ಆಯೋಜಿಸಿದಾಗ ಭಾಗವಹಿಸಬೇಕು. ಕ್ರೀಡೆಗಳಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ. ಇದರಿಂದ ಒತ್ತಡದಲ್ಲಿ ಕೆಲಸ ನಿರ್ವಹಿಸುವಂತಹುದನ್ನು ಸಮರ್ಥವಾಗಿ ನಿಭಾಯಿಸಬಹುದು ಎಂದರು. ಚಿಕ್ಕಬಳ್ಳಾಪುರದಲ್ಲಿ ಶೈಕ್ಷಣಿಕ ಕ್ರಾಂತಿಗೆ ಶ್ರಮಿಸಿದ ದಿ. ಸಿ.ವಿ. ವೆಂಕಟರಾಯಪ್ಪರವರ ಜನ್ಮ ದಿನಾಚರಣೆ ಪ್ರಯುಕ್ತ ತಮ್ಮ ಶಿಕ್ಷಣ ದತ್ತಿಯ ವತಿಯಿಂದ ಪ್ರತಿ ವರ್ಷ ತಮ್ಮ ಶಿಕ್ಷಣ ಸಂಸ್ಥೆಯ ಸಿಬ್ಬಂದಿ ಜೊತೆಗೆ ಪತ್ರಕರ್ತರಿಗಾಗಿ ಕ್ರೀಡಾಕೂಟಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ. ಜಯರಾಮ್, ಉಪಾಧ್ಯಕ್ಷ ಬಿ.ಎನ್ .ಮುನಿಕೃಷ್ಣಪ್ಪ, ಪ್ರಾಂಶುಪಾಲ ಆರ್. ವೆಂಕಟೇಶ್, ಪತ್ರಕರ್ತರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement