ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಚೆಂಡೂರಿನಲ್ಲಿ ಮಕ್ಕಳ ಆರೋಗ್ಯ ಶಿಬಿರ

Vishwanath S
Updated On : 17 Jul 2014, 1:12 am

ಗುಡಿಬಂಡೆ: ತಾಲೂಕಿನ ಚೆಂಡೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ತಾಲೂಕು ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಉನ್ನತಿ ಮಾನವ ಹಕ್ಕುಗಳ ರಕ್ಷಣಾ ಸಂಘ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಮಾಜಿ ಸೈನಿಕರ ಸಂಘದ ಆಶ್ರಯದಲ್ಲಿ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಈ ವೇಳೆ ಜೂನಿಯರ್ ರೆಡ್ ಕ್ರಾಸ್ ಘಟಕಕ್ಕೆ ಚಾಲನೆ ನೀಡಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಸಿ. ರವಿಕುಮಾರ್ ಮಾತನಾಡಿ, ಸ್ವಚ್ಛತೆ ಮತ್ತು ನೈರ್ಮಲ್ಯ ವಿಚಾರದಲ್ಲಿ ಮಕ್ಕಳು ಜಾಗೃತಿ ವಹಿಸಬೇಕು, ಪೋಷಕರು ಮತ್ತು ಶಿಕ್ಷಕರು ಮಕ್ಕಳ ಆರೋಗ್ಯ ವಿಚಾರದಲ್ಲಿ ಎಚ್ಚರಿಕೆ ವಹಿಸಿ ಅವರಿಗೆ ಆರೋಗ್ಯ ಜಾಗೃತಿ ಮೂಡಿಸಲು ಮುಂದಾಗಬೇಕು ಎಂದರು.
ರೆಡ್ ಕ್ರಾಸ್ ಸಂಸ್ಥೆಯ ತಾಲೂಕು ಕಾರ್ಯದರ್ಶಿ ವಿಶ್ವನಾಥ್, ರೆಡ್ ಕ್ರಾಸ್ ಸಂಸ್ಥೆ ಬೆಳೆದು ಬಂದ ವಿಚಾರಗಳ ಕುರಿತು ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಡಾ.ಕೆ.ಎಸ್. ಸ್ವಾತಿ, ಡಾ. ಈಶ್ವರ್ ಅವರ ವೈದ್ಯಕೀಯ ತಂಡ ಉಚಿತ ಆರೋಗ್ಯ ತಪಾಸಣೆ ನಡೆಸಿ ವೈದ್ಯಕೀಯ ಸಲಹೆ ಮತ್ತು ಔಷಧ ವಿತರಿಸಿದರು. ಈ ವೇಳೆ ಚಿಕ್ಕಬಳ್ಳಾಪುರ ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷ ರಮಣ, ನೇತ್ರ ತಜ್ಞ ಪುಷ್ಪರಾಜ್, ಲಕ್ಷ್ಮೀನರಸಿಂಹಗೌಡ, ಎಚ್. ನಾಗರಾಜ್, ಎಂ.ವಿ. ರವೀಂದ್ರ, ಡಿ. ಶ್ರೀನಿವಾಸ್ ಇದ್ದರು.
ಆರೋಗ್ಯ ಶಿಬಿರಗಳು ಸದುಪಯೋಗವಾಗಲಿ
ಗುಡಿಬಂಡೆ: ನೇತ್ರಗಳ ಬಗ್ಗೆ ಕಾಳಜಿ ಅಗತ್ಯ, ಗ್ರಾಮೀಣ ಜನತೆ ನೇತ್ರ ತಪಾಸಣಾ ಶಿಬಿರಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ಕುತುಸಿಯಾ ತಸ್ನೀಮಾ ಸಲಹೆ ನೀಡಿದರು.
 ತಾಲೂಕಿನ ಚೆಂಡೂರು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದಲ್ಲಿ ಏರ್ಪಡಿಸಿದ್ದ ಕಣ್ಣಿನ ಶಸ್ತ್ರ ಚಿಕಿತ್ಸಾ ಉಚಿತ ಶಿಬಿರ ಉದ್ಘಾಟಿಸಿ ಮಾತನಾಡಿದರು. ಶಂಕರ ಕಣ್ಣಿನ ಆಸ್ಪತ್ರೆಯ ವೈದ್ಯೆ ಡಾ. ದಿವ್ಯಗುಪ್ತ ಕಣ್ಣಿನ ಕಾಳಜಿಯ ಬಗ್ಗೆ ನಿರ್ಲಕ್ಷ್ಯ ವಹಿಸದೇ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಎರಡು ವಾರಕ್ಕೊಮ್ಮೆ ವೈದ್ಯರಿಂದ ತಪಾಸಣೆ ಮಾಡಿಸಿ ಕಣ್ಣಿನ ಸುರಕ್ಷತೆಯ ಬಗ್ಗೆ ಸಲಹೆ ಪಡೆಯಬೇಕು ಎಂದರು.
ರೆಡ್ ಕ್ರಾಸ್ ತಾಲೂಕು ಕಾರ್ಯದರ್ಶಿ ವಿಶ್ವನಾಥ್ ಮಾತನಾಡಿದರು. ಶಿಬಿರದಲ್ಲಿ 100ಕ್ಕೂ ಮೇಲ್ಪಟ್ಟು ಶಿಬಿರಾರ್ಥಿಗಳು ಚಿಕಿತ್ಸೆ ಪಡೆದು, ಕಣ್ಣಿನ ಶಸ್ತ್ರ ಚಿಕಿತ್ಸೆಗೆ 22 ಮಂದಿಯನ್ನು ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement