ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಅಕ್ಷರ ಜಾತ್ರೆಯಲ್ಲಿ ಅತ್ಯಾಚಾರ ರಿಂಗಣ

Mainashree
Updated On : 19 Jul 2014, 12:12 pm

ಬಾಗೇಪಲ್ಲಿ: ಕನ್ನಡ ನಾಡು ನುಡಿ ಸಾಹಿತ್ಯ ಗುಣಗಾನದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ಲೈಂಗಿನ ದೌರ್ಜನ್ಯಗಳು ನಡೆಯುತ್ತಿರುವುದರ ವಿರುದ್ಧ ಆಕ್ರೋಶ ವ್ಯಕ್ತವಾಯಿತು.
 ಕನ್ನಡಿಗರನ್ನು ತಲೆ ತಗ್ಗಿಸುವಂತೆ ಮಾಡುತ್ತಿರುವ ಇಂತಹ ಘಟನೆಗಳು ನಡೆಯದಂತಹ ವಾತಾವರಣ ನಿರ್ಮಾಣ ಮಾಡಲು ಪ್ರತಿಯೊಬ್ಬರು ಮುಂದಾಗಬೇಕೆಂಬ ಕರೆಯನ್ನು ನೀಡಲಾಯಿತು. ಪಟ್ಟಣದ ಸರ್ಕಾರಿ ಬಾಲಕಿಯರ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ 4ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು  ಉದ್ಘಾಟಿಸಿ ಮಾತನಾಡಿದ ಗೂಳೂರು ನಿಡುಮಾಮಿಡಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀ ವೀರಭದ್ರ ಚನ್ನಮಲ್ಲ ದೇಶೀಕೇಂದ್ರ ಮಹಾಸ್ವಾಮಿ, ಮಹಿಳೆಯರ ಮತ್ತು ಮಕ್ಕಳ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರಗಳು ನಡೆಯುತ್ತಿದ್ದರೂ ತಡೆಗಟ್ಟಬೇಕಾದ ರಾಜ್ಯ ಸರ್ಕಾರ ನಿದ್ದೆಯಲ್ಲಿದೆ ಎಂದು ಟೀಕಿಸಿದರು. ಇತ್ತೀಚೆಗೆ ರಾಜ್ಯದಲ್ಲಿ ಮಹಿಳೆಯರ ಹಾಗೂ ಮಕ್ಕಳ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯಗಳು ನಡೆಯುವುದು ಹೆಚ್ಚಾಗುತ್ತಿವೆ. ಇದಕ್ಕೆ ಸರ್ಕಾರ ಕಾನೂನನ್ನು ಬಿಗಿಗೊಳಿಸಬೇಕಾಗಿದೆ. ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿರುವಂತಹ ಆರೋಪಿಗಳಿಗೆ 6 ತಿಂಗಳಲ್ಲಿ ಉಗ್ರ ಶಿಕ್ಷೆಯಾಗಬೇಕು, ಈ ಪ್ರಕರಣಗಳನ್ನು ರಾಷ್ಟ್ರದ್ರೋಹ ಪ್ರಕರಣಗಳೆಂದು ಪರಿಗಣಿಸುವಂತಹ ಕಾನೂನನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು. ಕಾನೂನಿನ ಭಯವಿಲ್ಲದೇ ಯಾವುದೇ ರೀತಿಯ ಆರೋಪ ಮಾಡಿದರೂ ಹೊರಬರಬಹುದು ಎಂಬ ಸ್ವೇಚ್:ಾರದ ವರ್ತನೆ, ಸ್ವಾರ್ಥ, ವಿಕೃತ ವರ್ತನೆಗಳು ಸಮಾಜದಲ್ಲಿ ಹೆಚ್ಚಾಗುತ್ತಿವೆ. ಈ ರೋಗಗಳಿಗೆ ಸರಿಯಾದ ಪರಿಹಾರವನ್ನು ಕಂಡಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಪಾಯಕಾರಿ ಪರಿಸ್ಥಿತಿ ಎದುರಾಗುವ ಸಂಭವ ಹೆಚ್ಚಾಗಿದೆ ಎಂದರು. ಸಾಹಿತ್ಯ ಮತ್ತು ಸಾಂಸ್ಕೃತಿಕವಾಗಿ ಅವಿಭಜಿತ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬಡತನ ತಾಂಡವಾಡುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿರುವುದಕ್ಕೆ ವಿಷಾದಿಸಿದರು. ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಮಾತನಾಡಿದರು. ಸಮ್ಮೇಳದಲ್ಲಿ 4ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳದ ಅಧ್ಯಕ್ಷರ ಧರ್ಮಪತ್ನಿ ಸಂಜೀವರತ್ನ, ನಿಕಟಪೂರ್ವ ಸಮ್ಮೇಳನಾಧ್ಯಕ್ಷೆ ಗುಡಿಬಂಡೆ ಪೂರ್ಣಿಮಾ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಆರ್. ಕೃಷ್ಣ, ಕಾರ್ಯದರ್ಶಿ ಅಶ್ವತ್ಥ, ಕೆ.ಟಿ. ವೀರಾಜನೇಯಲು, ಜಿ.ಪಂ ಸದಸ್ಯರಾದ ಬಿ. ಸಾವಿತ್ರಮ್ಮ, ನಾರಾಯಣಮ್ಮ, ಅಮರಾವತಿ, ತಾ.ಪಂ.ಅಧ್ಯಕ್ಷೆ ಸುಜಾತ, ಉಪಾಧ್ಯಕ್ಷೆ ಸುಜಾತಮ್ಮ, ಪುರಸಭೆಯ ಅಧ್ಯಕ್ಷೆ ಉಷಾರಾಣಿ, ತಾ.ಪಂ.ಇಒ ಶ್ರೀನಿವಾಸ್, ಪುರಸಭೆಯ ಮುಖ್ಯಾಧಿಕಾರಿ ಆರ್ .ಶ್ರೀಕಾಂತ್, ಬೆಸ್ಕಾಂ ಅಧಿಕಾರಿ ಬಾಲಾಜಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement