ಅತ್ಯಾಚಾರಿಗಳ ಮೇಲೆ ಕಠಿಣ ಕ್ರಮಕ್ಕೆ ಒತ್ತಾಯ
ಮುಳಬಾಗಲು: ಜಿಲ್ಲೆಯಲ್ಲಿ ಈ ವಾರದಲ್ಲಿ ಏಳು ಅತ್ಯಾಚಾರ ಪ್ರಕರಣ ವರದಿಯಾಗಿದೆ. ಪೊಲೀಸರು ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡು ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆಂದು ಆರೋಪಿಸಿ ಪಟ್ಟಣದ ಟೆಎಪಿಸಿಎಂಎಸ್ ಸರ್ಕಲ್ ಬಳಿ ಶನಿವಾರ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಅತ್ಯಾಚಾರಿಗಳ ಪ್ರತಿಕೃತಿಗೆ ಬೆಂಕಿ ಇಟ್ಟು ಪ್ರತಿಭಟನೆ ನಡೆಸಿದರು. ಜನಪ್ರತಿನಿಧಿಗಳು ಅತ್ಯಾಚಾರಕ್ಕೆ ಗುರಿಯಾದ ನೊಂದ ಕುಟುಂಬದ ಸದಸ್ಯರನ್ನು ಕಂಡು ಕನಿಷ್ಟ ಸಾಂತ್ವನ ಹೇಳಲು ಸಹ ಬಿಡುವಿಲ್ಲವಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸ್ಥಳೀಯ ಪೊಲೀಸರು ಒತ್ತಡಗಳಿಗೆ ಮಣಿದು ದೂರು ದಾಖಲಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ದೂರಿದರು.