ಕಠಿಣ ಕ್ರಮದಿಂದ ಪ್ರಕರಣಕ್ಕೆ ಕಡಿವಾಣ
ಮುಳಬಾಗಲು: ಬಾಲಕಿಯರ ಮೇಲೆ ಮತ್ತು ಮಹಿಳೆಯರ ಮೇಲೆ ಅತ್ಯಾಚಾರವೆಸಗುವವರ ಮೇಲೆ ಬಿಗಿ ಕಾನೂನು ಕ್ರಮ ತೆಗೆದುಕೊಂಡಲ್ಲಿ, ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಬಹುದೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ ನುಡಿದರು. ತಾಲೂಕು ಕಸಬಾ ಹೋಬಳಿ ಮಜರಾ ಕೆಂಪಾಪುರ ಗ್ರಾಮದಲ್ಲಿ ಅತ್ಯಾಚಾರಕ್ಕೆ ಗುರಿಯಾಗಿದ್ದ ಅಪ್ರಾಪ್ತ ಬಾಲಕಿ ಮನೆಗೆ ಶನಿವಾರ ಸಂಜೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸ್ವಾಂತನ ಹೇಳಿದರು. ಅತ್ಯಾಚಾರಕ್ಕೆ ಗುರಿಯಾದ ಹೆಣ್ಣು ಮಕ್ಕಳನ್ನು ಕೀಳಾಗಿ ನೋಡದಿರಲು ಕೋರಿ, ಯುವಕರು ಸಹ ಸಂಯಮ ಪಾಲಿಸಬೇಕು. ಈ ಬಗ್ಗೆ ಅರಿವು ನೀಡುವ ಕಾರ್ಯಕ್ರಮ ನಡೆಯಬೇಕಿದೆ ಎಂದರು.