ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ದೌರ್ಜನ್ಯ ಕುರಿತ ಸಭೆಯಲ್ಲಿ ಪ್ರತಿಧ್ವನಿಸಿದ ಅತ್ಯಾಚಾರ ಪ್ರಕರಣ ಪ್ರತಿಧ್ವನಿ

Mainashree
Updated On : 20 Jul 2014, 12:19 pm

ಕೋಲಾರ: ತಾಲೂಕಿನ ಮದನಹಳ್ಳಿ ಗ್ರಾಮದಲ್ಲಿ ವಿವಾಹಿತೆಯ ಮೇಲೆ ಅತ್ಯಾಚಾರ ಯತ್ನ ನಡೆದಿರುವ ವಿಷಯ ಇಲ್ಲಿನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಧಿಕಾರಿ ಡಿ.ಕೆ. ರವಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ದೌರ್ಜನ್ಯ ಕುರಿತ ಸಭೆಯಲ್ಲಿ ಪ್ರತಿಧ್ವನಿಸಿತು.
 ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪಿ ವಿರುದ್ದ ಗ್ರಾಮಾಂತರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ ಎಂದು ರಾಮಾಂಜಮ್ಮ ಅವರು ನೊಂದ ಮಹಿಳೆಯೊಂದಿಗೆ ಸಭೆಯಲ್ಲಿ ಕಾಣಿಸಿಕೊಂಡು ದೂರಿದರು.
ಆರೋಪಿಯನ್ನು ಬಂಧಿಸಿ: ಮದನಹಳ್ಳಿ ಗ್ರಾಮದಲ್ಲಿ ತೋಟದ ಕೆಲಸಕ್ಕೆ ಹೋಗುತ್ತಿದ್ದ ವಿವಾಹಿತ ಮಹಿಳೆಯನ್ನು ಗ್ರಾಮದ ನಾರಾಯಣಸ್ವಾಮಿ ಎಂಬವರು ಜು. 12ರಂದು ಅಡ್ಡಗಟ್ಟಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬಗ್ಗೆ  ಗ್ರಾಮಾಂತರ ಠಾಣೆಯಲ್ಲಿ ಜು. 14ರಂದು ದೂರು ದಾಖಲಾಗಿದ್ದರೂ ಆರೋಪಿಯನ್ನು ಬಂಧಿಸಿಲ್ಲ ಎಂದು ಆರೋಪಿಸಿದರು.
 ಘಟನೆ ಕುರಿತು ಗ್ರಾಮಾಂತರ ಠಾಣೆ ಪೊಲೀಸರಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಬಂಧನಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ. ಪ್ರಸ್ತುತ ಆರೋಪಿ ತಲೆಮರೆಸಿಕೊಂಡಿದ್ದಾನೆ. ಶೀಘ್ರವೇ ಪತ್ತೆ ಹಚ್ಚಿ ಬಂಧಿಸುವುದಾಗಿ ಭರವಸೆ ನೀಡಿದರು.
ಚಿಕಿತ್ಸೆಗೆ ಸೂಚನೆ: ಮಾಲೂರಿನ ವಿಜವನಹಳ್ಳಿಯ ಚಂದ್ರಿಕಾ ದೂರು ನೀಡಿ, ತಮ್ಮ ಮೊದಲ ಹೆರಿಗೆಯ ಮಗುವನ್ನು ವಕ್ಕಲೇರಿ ಆಸ್ಪತ್ರೆಯಲ್ಲಿ ಬಿಸಿಜಿ ಚುಚ್ಚುಮದ್ದು ಕೊಡಿಸಿದಾಗ ಅಡ್ಡ ಪರಿಣಾಮ ಉಂಟಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಗುವನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ಸೂಕ್ತ ಚಿಕಿತ್ಸೆ ನೀಡಿ ಜೊತೆಗೆ ಬಿಲ್ ಮೊತ್ತಕ್ಕೆ ಪರಿಹಾರ ನೀಡಿ ಎಂದು ಡಿಎಚ್‌ಒಗೆ ಜಿಲ್ಲಾಧಿಕಾರಿ ಸೂಚಿಸಿದರು.
ಪರಸ್ಪರ ದೂರು: ಜಿಲ್ಲಾ ಮಟ್ಟದ ದೌರ್ಜನ್ಯ ಸಭೆಯಲ್ಲಿ ದಲಿತರ ಸಮಸ್ಯೆಗಳ ಬಗ್ಗೆ ಮಾತನಾಡುವುದಕ್ಕಿಂತ ಕೆಲ ಮುಖಂಡರು ತಮ್ಮ ಸ್ವಂತ ವಿಚಾರಗಳನ್ನು ಪ್ರಸ್ತಾಪಿಸಿ ಅಧಿಕಾರಿಗಳ ಮೇಲೆ ಒತ್ತಡ ತರುವ ಸಭೆಯಾಗಿ ಮಾರ್ಪಟ್ಟಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement