ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಬಾಲಕಿ ಅತ್ಯಾಚಾರಕ್ಕೆ ಯತ್ನ

Vishwanath S
Updated On : 22 Jul 2014, 12:56 pm

ಶಿಡ್ಲಘಟ್ಟ: ಆರು ವರ್ಷದ ಬಾಲಕಿಯ ಮೇಲೆ ಎರಡು ಬಾರಿ ಅತ್ಯಾಚಾರಕ್ಕೆ ಯತ್ನಿಸಿ ಪರಾರಿಯಾಗಿದ್ದ 20 ವರ್ಷದ ಯುವಕನೊಬ್ಬನನ್ನು ಶಿಡ್ಲಘಟ್ಟ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಳಮಾಚನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಯುವಕ ರವಿಕುಮಾರ್ ಬಾಲಕಿಗೆ ಆಮಿಷ ತೋರಿಸಿ ಮನೆಯೊಳಗೆ ಕರೆದುಕೊಂಡು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆಗ ಬಾಲಕಿ ಕಿರುಚಿಕೊಂಡಿದ್ದಾಳೆ. ತಕ್ಷಣ ಆರೋಪಿ ಪರಾರಿಯಾಗಿದ್ದಾನೆ. ಇದೇ ರೀತಿ ಶನಿವಾರ ಕೂಡಾ ಈತ ಅತ್ಯಾಚಾರಕ್ಕೆ ಯತ್ನಿಸಿದ್ದ. ಭಾನುವಾರ ಮಧ್ಯಾಹ್ನ ಆರೋಪಿ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ. ಆಗ ಜನರು ಆತನಿಗೆ ಧರ್ಮದೇಟು ನೀಡಿ, ಪೊಲೀಸರು ಒಪ್ಪಿಸಿದ್ದಾರೆ. ಪಿಎಸ್‌ಐ ಲಿಯಾಖತ್ ಖಾನ್ ಸ್ಥಳಕ್ಕೆ ಭೇಟಿ ನೀಡಿ, ಆರೋಪಿಯನ್ನು ಬಂಧಿಸಿದ್ದಾರೆ. ಬಾಲಕಿಯನ್ನು ಭಾನುವಾರ ಸಂಜೆ ಸರ್ಕಾರಿ ಆಸ್ಪತ್ರೆಗೆ ತಪಾಸಣೆಗೆ ದಾಖಲಿಸಲಾಗಿದೆ.  ಆರೋಪಿ ವಿರುದ್ಧ ಅತ್ಯಾಚಾರ ಯತ್ನ ಹಾಗೂ ಅಟ್ರಾಸಿಟಿ ಕೇಸ್ ದಾಖಲಿಸಿದ್ದಾರೆ. ಈ ಘಟನೆಯನ್ನು ಖಂಡಿಸಿ ಎಬಿವಿಪಿ ಹಾಗೂ ಎಸ್‌ಎಫ್‌ಐ ಸೇರಿ ವಿವಿಧ ಸಂಘಟನೆಗಳು ಸೋಮವಾರ ಶಿಡ್ಲಘಟ್ಟ ಬಂದ್‌ಗೆ ಕರೆ ನೀಡಿವೆ.
ಆರೋಪಿ ನ್ಯಾಯಾಂಗ ಬಂಧನಕ್ಕೆ: ಮಳಮಾಚನಹಳ್ಳಿಯಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ ರವಿಕುಮಾರ್‌ನನ್ನು ಆಗಸ್ಟ್ 4ರವಗೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅತ್ಯಾಚಾರ ಹಾಗೂಜಾತಿ ನಿಂದನೆ ಪ್ರಕರಣದಡಿ ಮೊಕದಮ್ಮೆ ದಾಖಲಾಗಿದ್ದು ಬಾಲಕಿಯನ್ನು ಮಹಿಳಾ ಸ್ವಾಂತನ ಕೇಂದ್ರಕ್ಕೆ ಒಪ್ಪಿಲಸಾಗಿದೆ. ಸರ್ಕಾರಿ ಅಸ್ಪತ್ರೆಯ ಮಹಿಳಾ ವೈದ್ಯರು ಪರೀಕ್ಷಿಸುತ್ತಿದ್ದು ಬಾಲಕಿ ಆಘಾತಕ್ಕೊಳಗಾಗಿದ್ದಾಳೆ ಎಂದು ತಿಳಿದು ಬಂದಿದೆ.
ಬೀದಿಗಿಳಿದ ವಿದ್ಯಾರ್ಥಿಗಳು
ಶಿಡ್ಲಘಟ್ಟ: ಮಹಿಳೆಯರ ಮೇಲೆ ನಡೆಯುತ್ತಿರುವ ಆತ್ಯಾಚಾರಗಳನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿವೆ ಎಂದು ಎಸ್‌ಎಫ್‌ಐ, ಡಿವೈಎಫ್‌ಐ ನೇತೃತ್ವದಲ್ಲಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಸಚಿವ ಜಾರ್ಜ್ ರಾಜಿನಾಮೆ ನೀಡಲಿ
ಚಿಕ್ಕಬಳ್ಳಾಪುರ: ಮಹಿಳೆಯರ ಮೇಲಿನ ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಸಚಿವ ಕೆ.ಜೆ.ಜಾರ್ಜ್ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟಿಸಿತು. ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಶಿಡ್ಲಘಟ್ಟ ವೃತ್ತದಲ್ಲಿ ಗೃಹ ಸಚಿವರ ಪ್ರತಿಕೃತಿ ದಹಿಸಿದರು.  ಪಕ್ಷದ ಜಿಲ್ಲಾಧ್ಯಕ್ಷ ಎನ್.ಎಂ.ರವಿನಾರಾಯಣರೆಡ್ಡಿ ಮಾತನಾಡಿ, ಗೃಹ ಸಚಿವರು ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು. ಉಪಾಧ್ಯಕ್ಷ ಅಗಲಗುರ್ಕಿ ಚಂದ್ರಶೇಖರ್ ಮಾತನಾಡಿದರು. ಪ್ರತಿಭಟನೆಯಲ್ಲಿ ಜಿಪಂ ಮಾಜಿ ಅಧ್ಯಕ್ಷ ನರಸಿಂಹಮೂರ್ತಿ, ಮುರಳೀಧರ್ , ಆರ್.ಶ್ರೀನಿವಾಸ್, ಜಿ.ವಿ.ಕೃಷ್ಣಯ್ಯ, ನಾಗಭೂಷಣ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement