ಕೋಲಾರ

ಫಲಿತಾಂಶ ಕುಸಿತ: ವಿಷಾದ

ಬಂಗಾರಪೇಟೆ: ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ನೀಡುವತ್ತ ಹೆಚ್ಚಿನ ಒತ್ತು ನೀಡಬೇಕು ಎಂದು ಕ್ಷೇತ್ರಶಿಕ್ಷಣಾಧಿಕಾರಿ ಕೆ. ಜಯರಾಜ್ ಹೇಳಿದರು.
ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಏರ್ಪಡಿಸಿದ್ದ ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ ಪದ್ದತಿ ಕುರಿತು ಉಪಗ್ರಹ ಆಧಾರಿತ ತರಬೇತಿ ಕಾರ್ಯಕ್ರಮ ತಾಂತ್ರಿಕ ವೈಫಲ್ಯದಿಂದ ಮುಂದೂಡಿದ ಸಂದರ್ಭ ಮಾತನಾಡಿ, ಅರ್ಹ, ಉತ್ತಮ ಶಿಕ್ಷಕರು ಇದ್ದರೂ ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಶ ಉತ್ತಮಪಡಿಲು ಸಾಧ್ಯವಾಗಿಲ್ಲ. ಜಿಲ್ಲೆಯಲ್ಲಿ ಬಂಗಾರಪೇಟೆ ಕೊನೆ ಸ್ಥಾನದಲ್ಲಿರುವುದು ವೈಫಲ್ಯತೆಗೆ ಸಾಕ್ಷಿಯಾಗಿದೆ ಎಂದು ವಿಷಾದಿಸಿದರು.
ಕೆಲ ಶಾಲೆಗಳಲ್ಲಿ ಮಕ್ಕಳಿಗಿಂತ ಶಿಕ್ಷಕರೇ ಹೆಚ್ಚಿದ್ದಾರೆ. ಆದರೆ ಶೈಕ್ಷಣಿಕ ಗುಣಮಟ್ಟ ಉತ್ತಮವಾಗಿಲ್ಲ.  ಬೆಳಗ್ಗೆ ಮತ್ತು ಸಾಯಂಕಾಲ ವಿಶೇಷ ತರಗತಿಗಳನ್ನು ವ್ಯವಸ್ಥೆಗೊಳಿಸಬೇಕು. ಪಾಠ ಯೋಜನೆ ಕಡ್ಡಾಯ. ಬೋಧನಾ ಉಪಕರಣ ಬಳಸಿಯೇ ಪಾಠ ಮಾಡಬೇಕು. ಶಾಲೆಯಲ್ಲಿನ ವಿವಿಧ ಕ್ಲಬ್‌ಗಳನ್ನು ಕ್ರಿಯಾಶೀಲಗೊಳಿಸಿ ಸಂತಸದ ಕಲಿಕೆಗೆ ಪ್ರೋತ್ಸಾಹಿಸಬೇಕು. ಫಲಿತಾಶ ಉತ್ತಮಪಡಿಸಲು ಮುಖ್ಯಶಿಕ್ಷಕರು ಕ್ರಮ ವಹಿಸಬೇಕು. ಆದೇಶ ಪಾಲಿಸದಿದ್ದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿ ಶಾಲೆಯಲ್ಲಿ ಮಕ್ಕಳ ಭದ್ರತೆಗೆ ವಿಶೇಷ ಕಾಳಜಿ ವಹಿಸಬೇಕು.  ಹೆಣ್ಣು ಮತ್ತು ಮಕ್ಕಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಮಾಡಿರಬೇಕು. ಅಡುಗೆ ಕೋಣೆಗೆ ಮಕ್ಕಳು ಪ್ರವೇಶಿಸದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು. ಬಾಲಕಿಯರ ಸರ್ಕಾರಿ ಪದವಿ ಪೂರ್ವಕಾಲೇಜು ಪ್ರೌಢಶಾಲೆ ವಿಭಾಗದ ಶಿಕ್ಷಕ ಎಲ್.ಎಂ. ಮಂಜುನಾಥ್ ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ ಬಗ್ಗೆ ಸ್ವಲ್ಪ ಹೊತ್ತು ಉಪನ್ಯಾಸ ನೀಡಿದರು.ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಯೋಜಕ ಯುವರಾಜ್ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

15 ವರ್ಷದ ಹಳೆ ವಿಡಿಯೋ ಅದಂತೆ.., ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': 'ಜೈಲರ್ 2' ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!