ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಲೈಂಗಿಕ ದೌರ್ಜನ್ಯ ವಿರೋಧಿಸಿ ಪ್ರತಿಭಟನೆ

Mainashree
Updated On : 28 Jul 2014, 12:05 pm

ಟೇಕಲ್: ರಾಜ್ಯದಲ್ಲಿ ಮಕ್ಕಳು ಮತ್ತು ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ವಿರೋಧಿಸಿ ಮಾಸ್ತಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಮಾಸ್ತಿ ಸರ್ಕಾರಿ ಪದವಿ ಪೂರ್ವ  ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಇತ್ತಿಚೆಗೆ ಅತ್ಯಾಚಾರ ಪ್ರಕರಣಗಳು ದಿನೆದಿನೆ ಹೆಚ್ಚುತ್ತಿವೆ. ಕೋಲಾರ ಜಿಲ್ಲೆಯಲ್ಲಿ 12 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು ಅಪ್ರಾಪ್ತೆಯರ ಮೇಲೆ ಅತ್ಯಾಚಾರಗಳು ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಗೂಂಡಾ ಕಾಯ್ದೆ ಜಾರಿಯಾಗಲಿ: ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸರ್ಕಾರಿ ಪದವಿ ಪೂರ್ವ ಕಾಲೇಜಿನ  ಪ್ರಾಂಶುಪಾಲ ರಾಮಚಂದ್ರಪ್ಪ, ಇತ್ತಿಚಿನ ದಿನಗಳಲ್ಲಿ 6 ವರ್ಷದ ಮಗುವಿನಿಂದ ಹಿಡಿದು ವಯೋವೃದ್ಧೆಯರ  ಮೇಲೆ ಪುರುಷರು ದೌರ್ಜನ್ಯ ನಡೆಸುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಗೂಂಡಾ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿದರು.
 ಪ್ರತಿಭಟನೆಯಲ್ಲಿ ತಾಲೂಕು ರೈತ ಸಂಘದ ಅಧ್ಯಕ್ಷ ಕೆ.ಬಿ.ಮಂಜುನಾಥ್, ಜಿ.ಪಂ. ಸದಸ್ಯೆ ಯಶೋಧ ಕೃಷ್ಣಮೂರ್ತಿ, ತಾ.ಪಂ. ನಾಗವೇಣಿ ಚಂದ್ರ, ಉಪಾಧ್ಯಕ್ಷೆ ಮಂಜುಳಾವೆಂಕಟೇಶ್, ಗ್ರಾ.ಪಂ. ಅಧ್ಯಕ್ಷ ಹೆಚ್.ವಿ.ಶ್ರೀನಿವಾಸ್, ವಿದ್ಯಾರ್ಥಿ ಒಕ್ಕೂಟದ ತಾಲೂಕು ಅಧ್ಯಕ್ಷ ಕೃಷ್ಣಮೂರ್ತಿ, ನವೀನ್, ತಿಮ್ಮರಾಯಪ್ಪ, ಗಿರೀಶ್, ಸಂತೋಷ್, ಭವ್ಯಾ, ಮಂಜುನಾಥ್, ಸಂತೋಷ್ ಕುಮಾರ್, ಹನುಮಯ್ಯ, ರಾಮು, ಭರತ್ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement