ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಎಂಇಎಸ್ ಪುಂಡಾಟಿಕೆಗೆ ಕನ್ನಡಿಗರ ಆಕ್ರೋಶ

Srinivasa Murthy VN
Updated On : 28 Jul 2014, 11:40 am

ಕೋಲಾರ: ಬೆಳಗಾವಿ ತಾಲೂಕಿನ ಯಳ್ಳೂರಿನಲ್ಲಿ ಮಹಾರಾಷ್ಟ್ರದ ನಾಮಫಲಕಗಳನ್ನು ಹಾಕಿ ಪುಂಡಾಟಿಕೆ ನಡೆಸಿರುವ ಎಂಇಎಸ್ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಹಾಗೂ ಕರ್ನಾಟಕ ಪೊಲೀಸರನ್ನು ಉಗ್ರರಿಗೆ ಹೋಲಿಕೆ ಮಾಡಿರುವ ಶಿವಸೇನೆಯ ನಾಯಕರನ್ನು ಬಂಧಿಸಬೇಕೆಂದು ಆಗ್ರಹಿಸಿ ಕೋಲಾರದಲ್ಲಿ ಸೋಮವಾರ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿತು.
ಎಂಇಎಸ್ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ಪದೇ ಪದೇ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆಯಾಗುವ ರೀತಿಯಲ್ಲಿ ದಾಂಧಲೆ ನಡೆಸುತ್ತಿದ್ದಾರೆ. ಕರ್ನಾಟಕ ಅವಿಭಾಜ್ಯ ಅಂಗವಾಗಿರುವ ಬೆಳಗಾವಿಯನ್ನು ಕಬಳಿಕೆ ಮಾಡುವ ದುರುದ್ದೇಶದಿಂದ ದೌರ್ಜನ್ಯ ನಡೆಸುತ್ತಿದ್ದಾರೆಂದು ಆರೋಪಿ ಕರವೇ ಕಾರ್ಯಕರ್ತರು ನಗರದ ಸರ್ಕಾರಿ ಬಸ್ ನಿಲ್ದಾಣ ವೃತ್ತದಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟಿಸಿದರು.
ರಾಜ್ಯ ಸರ್ಕಾರ ರಾಜಕೀಯ ಒತ್ತಡಕ್ಕೆ ಮಣಿದು ಮೌನವಾಗಿ ಕೂರಬಾರದು. ಎಂಇಎಸ್ ಕಾರ್ಯಕರ್ತರನ್ನು ಮಟ್ಟ ಹಾಕಿ ಮತ್ತೊಮ್ಮೆ ನಾಡಿನ ತಂಟೆಗೆ ಬರದಂತೆ ಕಠಿಣ ಕ್ರಮ ಕೈಗೊಳ್ಳಬೇಕು. ಪೊಲೀಸರ ಮೇಲೆ ಹಲ್ಲೆ ನಡೆಸಿರುವವರನ್ನು ಗೂಂಡಾ ಕಾಯಿದೆಯಡಿ ಬಂಧಿಸಿ, ಎಂಇಎಸ್‌ಸಂಘಟನೆಯನ್ನು ನಿಷೇಧಿಸಬೇಕೆಂದು ಜಿಲ್ಲಾಧ್ಯಕ್ಷ ಚಂಬೆ ರಾಜೇಶ್, ಜೆ.ಜೆ. ವಿಶ್ವನಾಥ್, ಜಯದೇವ ಪ್ರಸನ್ನ, ಕೃಷ್ಣಮೂರ್ತಿ, ಡೆಕೋರೇಷನ್ ಕೃಷ್ಣ ಇದ್ದರು.
ಪ್ರತಿಕೃತಿ ದಹನ: ವಕೀಲ ರಾಜಗೋಪಾಲಗೌಡ ನೇತೃತ್ವದ ನವ ಕರ್ನಾಟಕ ರಕ್ಷಣಾ ವೇದಿಕೆಯಿಂದ ಕೋಲಾರದಲ್ಲಿ ಎಂಇಎಸ್ ಮತ್ತು ಶಿವಸೇನೆಯ ವಿರುದ್ಧ ಪ್ರತಿಭಟನೆ ನಡೆಯಿತು. ವೇದಿಕೆ ಕಾರ್ಯಕರ್ತರು ಸರ್ಕಾರಿ ಬಸ್ ನಿಲ್ದಾಣದ ಬಳಿ ಎಂಇಎಸ್ ಪ್ರತಿಕೃತಿ ದಹನ ಮಾಡಿ ಘೋಷಣೆ ಕುಗಿದರು. ವಿವಾದಾತ್ಮಕ ನಾಮಫಲಕ ಹಾಕಿದ್ದಲ್ಲದೆ ಅದನ್ನು ತೆರವು ಮಾಡಲು ಹೋದ ಪೊಲೀಸರ ಮೇಲೆ ಕಲ್ಲು, ಚಪ್ಪಲಿ ತೂರಾಡಿ ದಾಂಧಲೆ ಎಸಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಬೆಳಗಾವಿ ಜಿಲ್ಲೆಯಿಂದ ಗಡಿಪಾರು ಮಾಡಬೇಕು. ಎಂದು ಆಗ್ರಹಿಸಿದರು. ವೇದಿಕೆಯ ಕೋಲಾರ ತಾಲೂಕು ಅಧ್ಯಕ್ಷ ದಿನೇಶ್, ಸೋಮನಾಥ್, ಮುನಿಸ್ವಾಮಿ, ಬಾಬು, ವಿಜಯನ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement