ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

93 ಅಂಗವಿಕಲರಿಗೆ ಸಾಧನಗಳ ವಿತರಣೆ

Rashmi Kasaragodu
Updated On : 1 Aug 2014, 1:29 am

ಕೋಲಾರ: ಸರ್ಕಾರ ನೀಡಿರುವ ಸಾಧನಗಳನ್ನು ಅಂಗವಿಕಲರು ಸದುಪಯೋಗಪಡಿಸಿಕೊಂಡು ಸಮಾಜದಲ್ಲಿ ಎಲ್ಲರಂತೆ ಬದುಕಿ ಉತ್ತಮ ಪ್ರಗತಿ ಸಾಧಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕಿ ಶಕುಂತಲಾ ತಿಳಿಸಿದರು. ನಗರದ ಎಸ್ಎನ್ಆರ್ ಆಸ್ಪತ್ರೆಯ ಆವರಣದಲ್ಲಿ ಗುರುವಾರ ಅವರು ಜಿಲ್ಲಾ ವಿಕಲಚೇತನರ ಪುರ್ನವಸತಿ ಕೇಂದ್ರ, ರೆಡ್ ಕ್ರಾಸ್ ಸಂಸ್ಥೆ, ನ್ಯಾಷನಲ್ ಇನ್ಸ್ಟಿಟ್ಯೂಟ್ ಫಾರ್ ಮೆಟಲ್ ಹ್ಯಾಂಡಿಕ್ಯಾಪ್ ಸಂಸ್ಥೆವತಿಯಿಂದ ಹಮ್ಮಿಕೊಂಡಿದ್ದ ಉಚಿತ ಸಾಧನಗಳ ವಿತರಣಾ ಸಮಾರಂಭದಲ್ಲಿ ಜಿಲ್ಲೆಯ 93 ಅಂಗವಿಕಲರಿಗೆ ಸಾಧನ ಸಲಕರಣೆಗಳನ್ನು ವಿತರಿಸಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಗಣೇಶ್ ಮಾತನಾಡಿ, ಕಳೆದ ಸೆಪ್ಟಂಬರ್ನಲ್ಲಿ ನೊಂದಣಿ ಮಾಡಿಕೊಂಡಿರುವ ಅಂಗವಿಕಲರಿಗೆ ಸಲಕರಣೆಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಅಂಗವಿಕಲರಿಗೆ ಈ ವರೆಗೆ 4.50 ಲಕ್ಷ ಮೌಲ್ಯದ ಸಾಧನ ಸಲಕರಣೆಗಳನ್ನು ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸೌಲಭ್ಯಗಳು ಸಿಗಲಿದೆ ಎಂದು ಹೇಳಿದರು. ಜಿಲ್ಲಾ ಹಿರಿಯ ನಾಗರಿಕರ ಮತ್ತು ನಾಗವೇಣಿ, ವಿ.ಪಿ.ಸೋಮಶೇಖರ್, ಡಾ.ಸುದರ್ಶನ್ ಜೈನ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement