ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ನೀರಿನ ಸಮಸ್ಯೆಗೆ ಶಾಸಕ ವರ್ತೂರ್ ಪ್ರಕಾಶ್ ನಗರ ಸಂಚಾರ

Srinivasa Murthy VN
Updated On : 2 Jun 2014, 1:45 am

ಕೋಲಾರ: ಮೊದಲ ಬಾರಿ ಶಾಸಕರಾಗಿದ್ದಾಗ ನಗರದಲ್ಲಿನ ನೀರಿನ ಸಮಸ್ಯೆ ನಿವಾರಣೆಗಾಗಿ ವಾಲ್‌ಮ್ಯಾನ್ ಆಗಿ ಕೆಲಸ ನಿರ್ವಹಿಸಿದ್ದ ವರ್ತೂರ್ ಆರ್. ಪ್ರಕಾಶ್ ಈಗ ನಗರ ಸಂಚಾರ ಮೂಲಕ ಜನತೆ ನೀರಿಗಾಗಿ ಎದುರಿಸುತ್ತಿರುವ ಬವಣೆ ಅರಿಯಲು ಮುಂದಾಗಿದ್ದಾರೆ.
ನಗರ ಸಂಚಾರ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜನರನ್ನು ಸಂಪರ್ಕಿಸಿ ಅವರ ಸಮಸ್ಯೆ ಅರಿಯಲು ಪ್ರಾಮಾಣಿಕ ಪ್ರಯತ್ನ ಇದಾಗಿದೆ ಎಂದು ತಿಳಿಸಿದರು.
ನಗರದ ಕೆಲವು ರಸ್ತೆಗಳ ಡಾಂಬರೀಕರಣ ವಿಳಂಬವಾಗುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, ಗುತ್ತಿಗೆದಾರರೊಬ್ಬರ ವಂಚನೆಯಿಂದಾಗಿ ಕಾಮಗಾರಿ ವಿಳಂಬವಾಗಿದ್ದು, ಶೀಘ್ರ ಮುಗಿಸಿಕೊಡುವುದಾಗಿ ಭರವಸೆ ನೀಡಿದರು.
ನೀರಿನ ಸಮಸ್ಯೆ ಪರಿಹಾರಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಸದ ಕೆ.ಎಚ್.ಮುನಿಯಪ್ಪ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಲು ನಿರ್ಧರಿಸಿದ್ದಾರೆ.
ತಾವೂ ಸಹ ಆ ಸಭೆಯಲ್ಲಿ ಭಾಗವಹಿಸಲಿರುವುದಾಗಿ ಹೇಳಿದರು. ಚುನಾವಣೆಯಲ್ಲಿ ತಾವು ಕೆ.ಎಚ್.ಮುನಿಯಪ್ಪ ಅವರನ್ನು ಬೆಂಬಲಿಸಿದ್ದು, ಸಂಸದರು ನೀಡಿರುವ ಭರವಸೆಯಂತೆ ಕಾಂಗ್ರೆಸ್ ಸರ್ಕಾರದಲ್ಲಿ ಉತ್ತಮ ಹುದ್ದೆ ಸಿಗುವ ವಿಶ್ವಾಸವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement