ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕೃಷಿ ಜತೆ ರೇಷ್ಮೆ ಇಲಾಖೆ ವಿಲೀನಕ್ಕೆ ತೀವ್ರ ವಿರೋಧ

Rashmi Kasaragodu
Updated On : 4 Jun 2014, 1:43 am

ಕೋಲಾರ: ರೇಷ್ಮೆ ಇಲಾಖೆಯನ್ನು ಕೃಷಿ ಇಲಾಖೆಯೊಂದಿಗೆ ವಿಲೀನಗೊಳಿಸಲು ಸರ್ಕಾರ ಮುಂದಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಕೇಂದ್ರ ರೇಷ್ಮೆ ಮಂಡಳಿಯ ಮಾಜಿ ಸದಸ್ಯ, ಬಿಜೆಪಿ ತಾಲೂಕು ಅಧ್ಯಕ್ಷ ಚಿನ್ನಾಪುರ  ನಾರಾಯಣಸ್ವಾಮಿ ಎಚ್ಚರಿಕೆ ನೀಡಿದರು.
ನಗರದ ಪತ್ರಕರ್ತರ ಭವನದಲ್ಲಿ ಜಿಲ್ಲಾ ರೇಷ್ಮೆ ಬೆಳೆಗಾರರ ಅಭಿವೃದ್ಧಿ ಸಂಘ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತ್ತಾ ರಾಜ್ಯ ಸರ್ಕಾರವು ರೇಷ್ಮೆ ಬೆಳೆಗಾರರ ಬಗ್ಗೆ ಸರಿಯಾಗಿ ತಿಳಿಯದೆ ಕೃಷಿ ಇಲಾಖೆಯಲ್ಲಿ ವಿಲೀನಕ್ಕೆ ಮುಂದಾಗುತ್ತಿರುವುದು ಅವೈಜ್ಞಾನಿಕ ಹಾಗೂ ರೇಷ್ಮೆ ಬೆಳೆಗಾರರಿಗೆ ಇದು ಮರಣ ಶಾಸನವಾಗಲಿದೆ ಎಂದು ಆರೋಪಿಸಿದರು.
ರೇಷ್ಮೆ ಇಲಾಖೆಯನ್ನು ಕೃಷಿಗೆ ವಿಲೀನಗೊಳಿಸಲು ಸರ್ಕಾರ ನೇಮಿಸಿರುವ ಸಮಿತಿಯ ಸದಸ್ಯರಿಗೆ ರೇಷ್ಮೆ ಬಗ್ಗೆ ಅರಿವು ಇಲ್ಲ. ರೇಷ್ಮೆ ಇಲಾಖೆ ಈ ಹಿಂದಿನಂತೆ ಮುಕ್ತವಾಗಿ ಸ್ವಾತಂತ್ರ್ಯವಾಗಿದ್ದರೆ ಮಾತ್ರ ಪ್ರಗತಿ ಸಾಧಿಸಲು ಸಾಧ್ಯ. ಯಾವುದೇ ನಿರ್ಧಾರವನ್ನು ತಾಂತ್ರಿಕವಾಗಿ ಚರ್ಚಿಸಿ ಕ್ರಮಕ್ಕೆ ಮುಂದಾಗಬೇಕೆಂದರು.
ಹೊದಲವಾಡಿ ವೆಂಕಟೇಶಪ್ಪ ಮಾತನಾಡಿ ರೇಷ್ಮೆಗೆ ಶೇ. 60:40ರ ಅನುಪಾತದಲ್ಲಿ ಅನುದಾನ ಬಿಡುಗಡೆ ಮಾಡಲಾಗುವುದು. ಆದರೆ ರಾಜ್ಯ ಸರ್ಕಾರವು ಕೇಂದ್ರದ ಹಣವನ್ನು ದುರ್ಬಳಕೆ ಮಾಡಿಕೊಂಡು ರೇಷ್ಮೆ ಬೆಳೆಗಾರರಿಗೆ ಹಣವನ್ನು ನೀಡಲು ವಿಳಂಬ ಮಾಡುತ್ತಿದೆ ಎಂದು ದೂರಿದರು.
ಮುಖಂಡ ಅರ್ಜುನ್ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ಕೋಚಿಮುಲ್ ನಿರ್ದೇಶಕ ರಾಮಕೃಷ್ಣೇಗೌಡ, ಜಿಲ್ಲಾಧ್ಯಕ್ಷ ಹೆಚ್.ಎನ್. ನಾರಾಯಣಸ್ವಾಮಿ, ಹೆಚ್.ಎಲ್. ನಾಗರಾಜು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement