ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ರೇಷ್ಮೆ ಗೂಡಿನ ಬಾಕ್ಸ್ ನೀಡಲು ರೈತ ಸಂಘದ ಆಗ್ರಹ

Rashmi Kasaragodu
Updated On : 4 Jun 2014, 1:42 am

ಶಿಡ್ಲಘಟ್ಟ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗಳಿಸಿರುವ ರೇಷ್ಮೆ ಗೂಡಿನ ಮಾರುಕಟ್ಟೆಗೆ ಗೂಡುಗಳನ್ನು ತುಂಬಲು ಬಾಕ್ಸ್‌ಗಳನ್ನು ಕೂಡಲೇ ನೀಡಬೇಕು ಎಂದು ಒತ್ತಾಯಿಸಿ ತಾಲೂಕು ರೈತ ಸಂಘದ ಪದಾಧಿಕಾರಿಗಳು ರೇಷ್ಮೆ ಅಭಿವೃದ್ಧಿ ಮಂಡಳಿಯ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.
ಪಟ್ಟಣದ ರೇಷ್ಮೆ ಗೂಡಿನ ಮಾರುಕಟ್ಟೆ ಉಪನಿರ್ದೇಶಕರ ಮೂಲಕ ಮನವಿಯನ್ನು ಸಲ್ಲಿಸಿದ ಅವರು ಕಳೆದ ಒಂದೂವರೆ ವರ್ಷದಿಂದ ಈ ಬಗ್ಗೆ ಮನವಿಗಳನ್ನು ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಬಾಕ್ಸ್‌ಗಳಿಗಾಗಿ ಜಗಳವಾಡಿಕೊಂಡು ಆಸ್ಪತ್ರೆ ಹಾಗೂ ಪೋಲಿಸ್ ಠಾಣೆಯ ಮೆಟ್ಟಿಲು ಏರಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಇಲಾಖೆಯ ಅಧಿಕಾರಿಗಳು ಗಮನಹರಿಸಿಲ್ಲ. ಜೂನ್ 10ರೊಳಗೆ ಬಾಕ್ಸ್ ಪೂರೈಸದಿದ್ದರೆ ಮಾರುಕಟ್ಟೆ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
ತಾಲೂಕು ರೈತ ಸಂಘದ ಅಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ಉಪಾಧ್ಯಕ್ಷ ಮುನಿನಂಜಪ್ಪ, ಎಂ.ದೇವರಾಜು, ಟಿ.ಆರ್.ದೇವರಾಜು, ಎನ್.ಎಸ್.ಶ್ರೀನಿವಾಸ್, ಮುಂತಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement