ಈ ಬಾರಿ ಬಿತ್ತನೆ ಗುರಿ
ಜಿಲ್ಲೆಯಲ್ಲಿ 2013-14ನೇ ಸಾಲಿನಲ್ಲಿ 1,54,000 ಹೆಕ್ಟೇರ್ ಪೈಕಿ 1,46,360 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಯಿತು. ಆದರೆ, ವಾರ್ಷಿಕ ಸರಾಸರಿ 750.3 ಮಿ.ಮೀ ಮಳೆಗೆ 578.7 ಮಿ.ಮೀ ಮಳೆಯಾಗಿ ಶೇ.27.9 ರಷ್ಟು ಕೊರತೆ ಕಂಡು ಬಂದಿತ್ತು. ಈ ಬಾರಿ ಉತ್ತಮ ಮಳೆಯ ನಿರೀಕ್ಷೆಯನ್ನು ಹೊಂದಿದ್ದು 97300 ಹೆಕ್ಟೇರ್ ಪ್ರದೇಶದಲ್ಲಿ ಏಕದಳ ಧಾನ್ಯಗಳು, 17200 ಹೆಕ್ಟೇರ್ ಪ್ರದೇಶದಲ್ಲಿ ದ್ವಿದಳ ಧಾನ್ಯಗಳು, 39150 ಹೆಕ್ಟೇರ್ ಪ್ರದೇಶದಲ್ಲಿ ಎಣ್ಣೆ ಕಾಳು ಬೆಳೆಗಳು ಮತ್ತು 350 ಹೆಕ್ಟೇರ್ ಪ್ರದೇಶದಲ್ಲಿ ವಾಣಿಜ್ಯ ಬೆಳೆಗಳು ಸೇರಿದಂತೆ ಒಟ್ಟು 154000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಪ್ರಮುಖವಾಗಿ 43000 ಹೆಕ್ಟೇರ್ ಪ್ರದೇಶದಲ್ಲಿ ರಾಗಿ, 49300 ಹೆಕ್ಟೇರ್ ಪ್ರದೇಶದಲ್ಲಿ ಹೈ.ಮು.ಜೋಳ, 9 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ, 5500 ಹೆಕ್ಟೇರ್ ಪ್ರದೇಶದಲ್ಲಿ ಅವರೆ ಮತ್ತು 37850 ಹೆಕ್ಟೇರ್ನಲ್ಲಿ ನೆಲಗಡಲೆ ಬೆಳೆ ಬೆಳೆಯುವ ಗುರಿ ಇದೆ.
ಬೀಜ ಮತ್ತು ರಸಗೊಬ್ಬರ
ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 19070 ಕ್ವಿಂಟಲ್ ವಿವಿಧ ಬಿತ್ತನೆ ಬೀಜ ಬೇಕಾಗಿದ್ದು, ಇದುವರೆಗೆ ಜಿಲ್ಲೆಯಲ್ಲಿ 9600 ಕ್ವಿಂಟಲ್ ಬಿತ್ತನೆ ಬೀಜಗಳ ದಾಸ್ತಾನಿದೆ. ಈ ತಿಂಗಳಾಂತ್ಯಕ್ಕೆ ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲು ಯೋಜನೆ ರೂಪಿಸಿದ್ದು, ಈಗಾಗಲೇ ಜಿಲ್ಲೆಯ ಆರು ತಾಲ್ಲೂಕುಗಳಲ್ಲಿನ 26 ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ದಾಸ್ತಾನು ಮಾಡಿಕೊಳ್ಳಲಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ ಯಾವುದೇ ಬಿತ್ತನೆ ಬೀಜಗಳಿಗೆ ಕೊರತೆ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ 2014ರ ಮುಂಗಾರು ಹಂಗಾಮಿಗೆ 48270 ಮೆ.ಟನ್ ವಿವಿಧ ರಸಗೊಬ್ಬರಗಳು ಹಂಚಿಕೆಯಾಗಿದ್ದು, ಪ್ರಸ್ತುತ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಗಮದ ಚಿಕ್ಕಬಳ್ಳಾಪುರ ಶಾಖೆಯಲ್ಲಿ ಕಾಪು ದಾಸ್ತಾನು 3439 ಮೆ.ಟನ್ ಮತ್ತು ಖಾಸಗಿ ಮಾರಾಟಗಾರರಲ್ಲಿ 13003 ಮೆ.ಟನ್ ಸೇರಿದಂತೆ ಒಟ್ಟಾರೆ 16442 ಮೆ.ಟನ್ ರಸಗೊಬ್ಬರ ದಾಸ್ತಾನಿದೆ.