ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಮುಂಡೆ ನಿಧನಕ್ಕೆ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾಂಜಲಿ

Rashmi Kasaragodu
Updated On : 6 Jun 2014, 2:25 am

ಶಿಡ್ಲಘಟ್ಟ: ಅಪಘಾತದಲ್ಲಿ ಸಾವನ್ನಪ್ಪಿರುವ ಕೇಂದ್ರ ಸಚಿವ ಗೋಪಿನಾಥ್ ಮುಂಡೆ ಅವರ ನಿಧನಕ್ಕೆ ತಾಲೂಕು ಬಿಜೆಪಿ ಕಚೇರಿಯಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಪಟ್ಟಣದ ತಾಲೂಕು ಬಿಜೆಪಿ ಕಚೇರಿಯಲ್ಲಿ ಮುಂಡೆ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದ ನಂತರ ಮಾತನಾಡಿದ ತಾಲೂಕು ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರಗೌಡ, ಮಹಾರಾಷ್ಟ್ರದಲ್ಲಿ ಬಿಜೆಪಿ ಸಂಘಟನೆಗಾಗಿ ಸಾಮಾನ್ಯ ಕಾರ್ಯಕರ್ತನಿಂದ ದುಡಿದು, ಉಪಮುಖ್ಯಮಂತ್ರಿಯಾಗಿ ಕೇಂದ್ರ ಸಚಿವರಾಗಿ ಆಯ್ಕೆಯಾಗಿದ್ದ ಅವರು ದೇಶ ಸೇವೆಗಾಗಿ ತಮ್ಮನ್ನು ತೊಡಗಿಸಿಕೊಂಡವರು, ದೇಶದ ಬಗ್ಗೆ ಅಪಾರವಾದ ದೂರದೃಷ್ಟಿಯನ್ನಿಟ್ಟುಕೊಂಡಿದ್ದವರು ಅಂತಹ ಮಹಾನ್ ಚೇತನದ ಅಗಲಿಕೆಯಿಂದಾಗಿ ರಾಷ್ಟ್ರ ಬಿಜೆಪಿ ಮಾತ್ರವಲ್ಲದೆ, ರಾಜ್ಯಕ್ಕೂ ಅಪಾರ ನಷ್ಟವುಂಟಾಗಿದೆ, ಅವರ ತತ್ವ ಆದರ್ಶಗಳು ಪಕ್ಷದ ಕಾರ್ಯಕರ್ತರಿಗೆ ಮಾರ್ಗದರ್ಶನವಾಗಬೇಕು ಎಂದರು. ಬಿಜೆಪಿ  ಮುಖಂಡ ಶಿವಕುಮಾರಗೌಡ ಮಾತನಾಡಿ, ಮುಂಡೆ ಅವರು ರಾಷ್ಟ್ರಕ್ಕೆ ವಿಶೇಷವಾದ ಕೊಡುಗೆಯನ್ನು ನೀಡುವಂತಹ ದೂರದೃಷ್ಟಿ ಹೊಂದಿದ್ದರು. ಅವರ ಕನಸನ್ನು ನನಸು ಮಾಡಬೇಕಾದಂತಹ ಅನಿವಾರ್ಯತೆ ನಮ್ಮೆಲ್ಲರ ಮೇಲಿದೆ ಎಂದರು. ಜಿಲ್ಲಾ ಕಾರ್ಯದರ್ಶಿ ರಮೇಶ್ ಬಾಯಿರಿ, ತಾಲೂಕು ಬಿಜೆಪಿ ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರಗೌಡ, ಕಾರ್ಯದರ್ಶಿ ಶ್ರೀಧರ್, ಹನುಮೇಗೌಡ, ಶಿವಕುಮಾರಗೌಡ, ನರೇಶ್, ಕೆಂಪರೆಡ್ಡಿ, ಬಿ.ಸಿ.ನಂದೀಶ್, ಸುಜಾತಮ್ಮ, ಮುತ್ತೂರು ಶಿವಮ್ಮ, ಗಾಂಧಿನಗರ ಅಶ್ವಥ್ ಮುಂತಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement