ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಮಾಸ್ತಿಯವರದ್ದು ಕನ್ನಡ ಸೇವೆ

Rashmi Kasaragodu
Updated On : 7 Jun 2014, 1:14 am

ಕೋಲಾರ: ಕನ್ನಡಕ್ಕೆ ನಾಲ್ಕನೇ ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟ ಮಾಸ್ತಿ ಜೀನವ ಪರ್ಯಂತ ಕನ್ನಡ ಸೇವೆ ಮಾಡಿದಂತೆ ಪ್ರತಿಯೊಬ್ಬರು ಕನ್ನಡ ಸೇವೆಯನ್ನು ಕೈಗೊಳ್ಳಬೇಕೆಂದು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ  ಜಿ. ಶ್ರೀನಿವಾಸ್ ಅಭಿಪ್ರಾಯಪಟ್ಟರು.
ನಗರದ ಕುರುಬರಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ರವರ 124ನೇ ಜನ್ಮೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿ ಜಿಲ್ಲಾ ಬಡ್ತಿ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷರಾದ ಆರ್. ಶ್ರೀನಿವಾಸನ್ ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯ ವಿ. ರಾಮಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದು, ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷರಾದ ರತ್ನಮ್ಮ, ಸಹ ಶಿಕ್ಷಕರಾದ ಎಸ್. ಶಶಿಕಲಾ ಇದ್ದರು. ಶಿಕ್ಷಕಿ ಎನ್. ಕೆ. ಲಾವಣ್ಯ ಸ್ವಾಗತಿಸಿ, ಶಿಕ್ಷಕಿ ನಾರಾಯಣಮ್ಮ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement