ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

'ಪತ್ರಕರ್ತರಲ್ಲಿ ಮೌಲ್ಯ ಕ್ಷೀಣ'

Rashmi Kasaragodu
Updated On : 8 Jun 2014, 2:26 am

ಬಂಗಾರಪೇಟೆ: ಇತ್ತೀಚಿನ ದಿನಗಳಲ್ಲಿ ಪತ್ರಕರ್ತರಲ್ಲಿ ಮೌಲ್ಯಗಳು ಕಡಿಮೆಯಾಗುತ್ತಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ. ಗೋಪಿನಾಥ್ ವಿಷಾದ ವ್ಯಕ್ತಪಡಿಸಿದರು.
 ಪಟ್ಟಣದ ಕುವೆಂಪು ವೃತ್ತದಲ್ಲಿರುವ ರೆಡ್ಡಿ ಮಿನಿ ಹಾಲ್‌ನಲ್ಲಿ ಏರ್ಪಡಿಸಿದ್ದ ಕರ್ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಕೆ.ಎಸ್. ಗಣೇಶ್ ಅವರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿ ಪತ್ರಕರ್ತರು ತಮ್ಮದೇ ಆದ ಶೈಲಿಯಲ್ಲಿ ಕೆಲಸ ಮಾಡಬೇಕು, ಸಮಾಜಕ್ಕೆ ಸ್ಪಂದಿಸಿ ಕೆಲಸ ಮಾಡಿದಾಗ ಪತ್ರಕರ್ತರಿಗೆ ಸಾರ್ಥಕತೆ ಬರುತ್ತದೆ. ಎಲ್ಲ ಪತ್ರಕರ್ತರು ಒಟ್ಟಾಗಿ ಒಂದು ಕಡೆ ಸೇರುವ ಅವ್ಯಾಸ ರೂಡಿಸಿಕೊಳ್ಳಬೇಕು ಕಷ್ಟ ಸುಖಗಳನ್ನು ಹಂಚಿಕೊಳ್ಳಬೇಕು. ಎಲ್ಲರೂ ಒಟ್ಟಾಗಿ ಒಗ್ಗಟ್ಟಾಗಿ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಬೇಕೆ  ವಿನಃ ಹಣಕ್ಕಾಗಿ ಬೆದರಿಕೆ ಹಾಕಿ ವೃತ್ತಿಗೆ ಕಳಂಕ ತರುವ ಕೆಲಸ ಮಾಡಬಾರದು ಎಂದು ಹೇಳಿದರು. ಸನ್ಮಾನ ಸ್ವೀಕರಿಸಿ ಗಣೇಶ್ ಮಾತನಾಡಿ ಪತ್ರಕರ್ತರು ಅಹಂ ಬಿಡಬೇಕು, ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ನಮ್ಮ ಕರ್ತವ್ಯವನ್ನು ನಿರ್ವಹಿಸಬೇಕು, ಸಮಾಜ ನಮ್ಮನ್ನು ಗಮನಿಸುತ್ತಿರುತ್ತದೆ ಅದನ್ನು ಅರಿತು ಎಲ್ಲಾ ಪತ್ರಕರ್ತರು ಕೆಲಸ ಮಾಡಿದಾಗ ನಮ್ಮ ಹಕ್ಕು ಮತ್ತು ಸೌಲಭ್ಯಗಳನ್ನು ಪಡೆಯಲು ಸಾಧ್ಯ ಎಂದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement