ಮಾಸಿಕ ಕೆಡಿಪಿ ಸಭೆ
ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜೂ.11 ರಂದು ಬೆಳಗ್ಗೆ 11 ಗಂಟಗೆ ಮಾಸಿಕ ಕೆಡಿಪಿ ಸಭೆ ಆಯೋಜಿಸಲಾಗಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ ಸಭೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೀಲಾ ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತ್ರೈಮಾಸಿಕ ಸಭೆ
ಚಿಕ್ಕಬಳ್ಳಾಪುರ: ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜೂ.13 ರಂದು ಬೆಳಗ್ಗೆ 11 ಗಂಟೆಗೆ ತ್ರೈಮಾಸಿಕ ಕೆಡಿಪಿ ಸಭೆ ಆಯೋಜಿಸಲಾಗಿದೆ. ಶಾಸಕ ಡಾ.ಕೆ.ಸುಧಾಕರ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಾಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಗಿರಿಜಾಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಟಕೋತ್ಸವ
ಚಿಕ್ಕಬಳ್ಳಾಪುರ: ಗುಡಿಬಂಡೆ ತಾಲೂಕು ಬೀಚಗಾನಹಳ್ಳಿಯಲ್ಲಿ ಜೂ.10 ರಿಂದ ಜೂ.14 ರವರೆಗೆ ಸಂಜೆ 7.30ಕ್ಕೆ (ಪ್ರತಿದಿನ) ನಾಟಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಐಶ್ವರ್ಯ ಕಲಾನಿಕೇತನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾಗೂ ಸಾಂಸ್ಕೃತಿಕ ಸಚಿವಾಲಯ ಸಹಯೋಗದಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ಬಿಎಂಟಿಸಿ ಭದ್ರತಾ ಮತ್ತು ಜಾಗೃತಿ ನಿರ್ದೇಶಕ ಡಾ.ಜಿ.ರಮೇಶ್ ನೆರವೇರಿಸಲಿದ್ದು, ಜಿಪಂ ಸಿಇಒ ನೀಲಾ ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. ಟಿ.ಜಿ. ನರಸಿಂಹಮೂರ್ತಿ, ಚಿತ್ರ ನಿರ್ದೇಶಕರಾದ ಕೆ.ಶಿವರುದ್ರಯ್ಯ, ಬೂದಾಳ್ ಕೃಷ್ಣಮೂರ್ತಿ
ಮತ್ತಿತರರು ಭಾಗವಹಿಸಲಿದ್ದಾರೆ. ಪ್ರತಿ ದಿನ ಸಂಜೆ 7.30 ಕ್ಕೆ ರಕ್ತ ರಾತ್ರಿ, ಹೇಮರೆಡ್ಡಿ ಮಲ್ಲಮ್ಮ, ಗಿರಿಜಾ ಕಲ್ಯಾಣ, ಸಂಗ್ಯಾಬಾಳ್ಯ ಹಾಗೂ ನನಗ್ಯಾಕೋ ಡೌಟ್ ನಾಟಕ ಪ್ರದರ್ಶನ ನಡೆಯಲಿದೆ.
ವೀಕ್ಷಕರ ನೇಮಕ
ಚಿಕ್ಕಬಳ್ಳಾಪುರ: ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ವೀಕ್ಷಕರನ್ನು ನೇಮಿಸಿದ್ದು, ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಎಂ.ಆರ್.ಕಾಂಬ್ಳೆ ಚುನಾವಣಾ ವೀಕ್ಷಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ದೂರು ಇದ್ದಲ್ಲಿ,
ದೂ.080-22204153 ಅಥವಾ ಮೊ. 9845417979 ಇಲ್ಲಿಗೆ ಸಂಪರ್ಕಿಸಲು ಕೋರಲಾಗಿದೆ.
ವ್ಯಕ್ತಿ ಮೇಲೆ ದಾಳಿ
ಮುಳಬಾಗಲು: ತಾಲೂಕಿನ ದೊಡ್ಜಗುರ್ಕಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಶ್ರೀನಿವಾಸ್ ಮೇಲೆ ಕ್ಷುಲ್ಲಕ ಕಾರಣಕ್ಕೆ ಶನಿವಾರ ಬೆಳಗ್ಗೆ ಹಲ್ಲೆ ನಡೆದಿದೆ.ಕಾರಣ ತೀವ್ರವಾಗಿ ಗಾಯಗೊಂಡ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಬಂಗೊಳ್ಳ ಕೃಷ್ಣಪ್ಪ ಎಂಬುವರು ಹಲ್ಲೆ ನಡೆಸಿದವರೆನ್ನಲಾಗಿದೆ. ಮುಳಬಾಗಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.