ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಗ್ರಂಥಾಲಯ ನೌಕರರ ಸಮಸ್ಯೆ ನಿವಾರಣೆಗೆ ಯತ್ನ

Rashmi Kasaragodu
Updated On : 10 Jun 2014, 1:23 am

ಕ.ಪ್ರ. ವಾರ್ತೆ ಟಿ ಕೋಲಾರ ಟಿ ಜೂ. 9
ಜಿಲ್ಲೆ ಸೇರಿದಂತೆ ರಾಜ್ಯದಲ್ಲಿನ ಎಲ್ಲಾ ಗ್ರಂಥಾಲಯಗಳ ಮೇಲ್ವಿಚಾರಕರ ಸಮಸ್ಯೆಗಳನ್ನು ನಿವಾರಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಮತ್ತು ಸಚಿವರೊಂದಿಗೆ ಚರ್ಚಿಸುವುದಾಗಿ ರಾಜ್ಯ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ. ಸತೀಶ್ ಹೊಸಮುನಿ ತಿಳಿಸಿದರು.
ನಗರದ ಡಿ.ವಿ.ಜಿ. ಗುಂಡಪ್ಪ ಜಿಲ್ಲಾ ಗ್ರಂಥಾಲಯದಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಸಂಘದ ವತಿಯಿಂದ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಸನ್ಮಾನವನ್ನು ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.
ಕರ್ನಾಟಕದಲ್ಲಿನ ಸಾರ್ವಜನಿಕರ ಗ್ರಂಥಾಲಯ ಒಳ್ಳೆಯ ಹೆಸರನ್ನು ಪಡೆದಿದೆ. ಇದಕ್ಕೆ ನೌಕರರು ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಿರುವುದೇ ಕಾರಣವಾಗಿದೆ. ನೌಕರರ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಬೆಂಗಳೂರಿನಲ್ಲಿ ಈ ತಿಂಗಳ ಕೊನೆ ವಾರದಲ್ಲಿ ಜಿಲ್ಲೆ ಮಟ್ಟದ ಅಧಿಕಾರಿಗಳ ಸಭೆಯನ್ನು ಕರೆದಿದ್ದು, ನೌಕರರ ಸಮಸ್ಯೆಗಳ ಬಗ್ಗೆ ಚರ್ಚೆನಡೆಸಿ ಆದ್ಯತೆ ಮೇರೆಗೆ ಬೇಡಿಕೆ ಈಡೇರಿಸಲಾಗುತ್ತದೆ ಎಂದರು.
ಸಾರ್ವಜನಿಕ ಗ್ರಂಥಾಲಯ ಇಲಾಖೆಯ ವಿಶೇಷಾಧಿಕಾರಿ ಚನ್ನಕೇಶವ ಮಾತನಾಡಿದರು. ಸಾರ್ವಜನಿಕ ಗ್ರಂಥಾಲಯ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಶ್ರೀಧರಮೂರ್ತಿ, ರಾಜ್ಯ ಮೇಲ್ವಿಚಾರಕರ ಸಂಘದ ಉಪಾಧ್ಯಕ್ಷ ನಾರಾಯಣಸ್ವಾಮಿ, ಜಿಲ್ಲಾ ಗ್ರಂಥಾಲಯಾಧಿಕಾರಿ ಗಣೇಶ್, ಕೆಜಿಎಫ್ ಮುಖ್ಯಾಧಿಕಾರಿ ವಾತ್ಸಲ ವಾಸಂತಿ, ಇದ್ದರು. ಮೇಲ್ವಿಚಾರಕರ ಸಂಘದ ಜನ್ನಘಟ್ಟ ಕೃಷ್ಣಮೂರ್ತಿ ಸ್ವಾಗತಿಸಿ, ಸುಬ್ರಮಣಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement