ನೀರು ಪೂರೈಕೆಗೆ ಖಾಲಿ ಬಿಂದಿಗೆ ಪ್ರದರ್ಶನ
ಚಿಂತಾಮಣಿ: ಕೆ.ಗೊಲ್ಲಹಳ್ಳಿ ಗ್ರಾಮಕ್ಕೆ ಕುಡಿಯುವ ನೀರಿಲ್ಲವೆಂದು ಗ್ರಾಮಸ್ಥರು ಆರೋಪಿಸಿ ತಾಲೂಕು ಕಚೇರಿ ಮುಂಭಾಗ ನೂರಾರು ಗ್ರಾಮಸ್ಥರು ಖಾಲಿ ಬಿಂದಿಗೆಗಳನ್ನು ಹಿಡಿದು ಪ್ರತಿಭಟನೆ ನಡೆಸಿದ ಘಟನೆ ಸೋಮವಾರನಗರದಲ್ಲಿ ನಡೆದಿದೆ. ಗ್ರಾಮಕ್ಕೆ ಕಳೆದ 8 ತಿಂಗಳಿನಿಂದ ನೀರಿನ ಸಮಸ್ಯೆ ಎದುರಾಗಿದೆ. ಈ ಬಗ್ಗೆ ಗ್ರಾಮಸ್ಥರು ಗ್ರಾಪಂ ಎಷ್ಟೇ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಕಚೇರಿ ಎದುರು ಪ್ರತಿಭಟನೆ ಮಾಡಬೇಕಾಯಿತು ಎಂದು ಪ್ರತಿಭಟನಾಕಾರರು ತಿಳಿಸಿದರು.ಈ ವೇಳೆ ಮಾತನಾಡಿದ ನಂಜುಂಡಾಚಾರಿ ಮಾತನಾಡಿದರು. ನಂತರ ಸ್ಥಳಕ್ಕಾಗಮಿಸಿದ ತಹಸೀಲ್ದಾರ್ ಜಿ.ವಿ.ಹನುಮಂತರೆಡ್ಡಿ, ಪ್ರತಿಭಟನಗಾರರನ್ನು ಸಮಾಧಾನ ಪಡಿಸಿ, ಟ್ಯಾಂಕರ್‌ಗಳ ಮೂಲಕ ನೀರು ಪೂರೈಸುವ ಭರವಸೆ ನೀಡಿದರು. ಕೆ.ಗೊಲ್ಲಹಳ್ಳಿ ಗ್ರಾಮದ ಲಲಿತಮ್ಮ, ವೀಣಾ, ವೆಂಕಟಮ್ಮ, ವಿಜಯಮ್ಮ, ವಿನೋದಮ್ಮ, ಮಂಜುಳ,ನಾರಾಯಣಾಚಾರಿ, ಸೀತಾರಾಮರೆಡ್ಡಿ, ನಾರಾಯಣಸ್ವಾಮಿ, ಮುನಿಯಪ್ಪ, ಶ್ರೀರಾಮಪ್ಪ ಸೇರಿದಂತೆ ನೂರಾರು ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.