ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಮರದ ಕೆಳಗೆ ಮಕ್ಕಳ ಕಲಿಕೆ!

Rashmi Kasaragodu
Updated On : 10 Jun 2014, 1:24 am

ಶಿಡ್ಲಘಟ್ಟ: ಪ್ರತಿಯೊಂದು ಮಗು ಕಡ್ಡಾಯವಾಗಿ ಶಿಕ್ಷಣ ಪಡೆಯಬೇಕೆನ್ನುವ ಸರ್ಕಾರ ಮೂಲ ಸೌಲಭ್ಯ ಒದಗಿಸುವಲ್ಲಿ ವಿಫಲವಾಗಿದೆ ಎಂದು ನಾಗರಿಕರು ಆರೋಪಿಸಿದ್ದಾರೆ. ತಾಲೂಕಿನ ತುಮ್ಮನಹಳ್ಳಿ ಗ್ರಾಪಂ ವ್ಯಾಪ್ತಿಯ ಸೊರಕಾಯಲಹಳ್ಳಿ ಗ್ರಾಮದ ಅಂಗನವಾಡಿ ಇದಕ್ಕೆ ಉದಾಹರಣೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ ಅಂಗನವಾಡಿ ಕೇಂದ್ರಗಳನ್ನು ನಿರ್ವಹಣೆ ಮಾಡಲಾಗುತ್ತಿದ್ದು, ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕಾಗಿ ಟೆಂಡರ್ ನೀಡಿದ್ದರೂ ಕಟ್ಟಡ ನಿರ್ಮಿಸಿಲ್ಲ. ಮಕ್ಕಳಿಗೆ ಮರದ ಕೆಳಗೆ ಕಲಿಸಲಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡು ಅಂಗನವಾಡಿ ಕೇಂದ್ರ ನಿರ್ಮಾಣ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement