ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಹಲವೆಡೆ ರಸ್ತೆ ಗುಣಮಟ್ಟ ಪ್ರಯೋಗಾಲಯ

Rashmi Kasaragodu
Updated On : 11 Jun 2014, 1:27 am

ಕೋಲಾರ: ರಸ್ತೆಗಳ ಗುಣಮಟ್ಟ ಪರೀಕ್ಷೆಗಾಗಿ ಶಿವಮೊಗ್ಗ ಜಿಲ್ಲೆಯ ಮಾದರಿಯಲ್ಲಿ ಲೋಕೋಪಯೋಗಿ ಇಲಾಖೆಯ 35 ಉಪ ವಿಭಾಗದಲ್ಲಿ ಪ್ರಾಯೋಗಾಲಯ ಸ್ಥಾಪಿಸಲಾಗುತ್ತದೆ ಎಂದು ಲೋಕೋಪಯೋಗಿ ಇಲಾಖೆಯ ಸಚಿವ ಡಾ. ಎಚ್.ಸಿ. ಮಹದೇವಪ್ಪ ತಿಳಿಸಿದರು. ಕೋಲಾರ ಜಿಪಂ ಸಭಾಂಗಣದಲ್ಲಿ ಮಂಗಳವಾರ ಸಂಜೆ ಸುದ್ದಿಗಾರರ ಜತೆ ಮಾತನಾಡಿದ ಅವರು, ರಸ್ತೆಗಳ ಗುಣಮಟ್ಟದ ಪರೀಕ್ಷೆಗಾಗಿ ಶಿವಮೊಗ್ಗ ಹೊರತುಪಡಿಸಿ ರಾಜ್ಯದ ಬೇರೆ ಯಾವುದೇ ಉಪ ವಿಭಾಗದಲ್ಲಿ ಪ್ರಾಯೋಗಾಲಯವಿಲ್ಲ. ರಸ್ತೆಗಳ ಕಾಮಗಾರಿಗಳ ಬಗ್ಗೆ ಜನತೆಯಿಂದ ಕೇಳಿ ಬಂದ ದೂರಿನ ಹಿನ್ನೆಲೆಯಲ್ಲಿ ಗುಣಮಟ್ಟ ಪರೀಕ್ಷೆಯ ಪ್ರಾಯೋಗಾಲಯವನ್ನು ಇನ್ನು ಆರು ತಿಂಗಳಲ್ಲಿ ರಾಜ್ಯದ ಎಲ್ಲ ಉಪ ವಿಭಾಗದಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement