ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

9 ಸ್ಕೌಟ್ಸ್ ಗೈಡ್‌ಗಳಿಗೆ ರಾಜ್ಯ ಪುರಸ್ಕಾರ

Rashmi Kasaragodu
Updated On : 13 Jun 2014, 2:20 am

ಕೋಲಾರ: ಜಿಲ್ಲೆಯ 9 ಮಂದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ಗಳು ರಾಜ್ಯ ಪುರಸ್ಕಾರ ಪ್ರಶಸ್ತಿಯನ್ನು ಪಡೆದಿದ್ದಾರೆ.
ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ಕರ್ನಾಟಕ ರಾಜ್ಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ, ರಾಜ್ಯ ಪುರಸ್ಕಾರ ಪ್ರಶಸ್ತಿಯನ್ನು ರಾಜ್ಯಪಾಲ ಹಂಸರಾಜ್ ಭಾರದ್ವಾಜ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹಾಗೂ ಸಂಸ್ಥೆಯ ಹಿರಿಯ ಅಧಿಕಾರಿಗಳು ಈ ಪ್ರಶಸ್ತಿಗಳನ್ನು ವಿತರಿಸಿದರು.
ಪ್ರಶಸ್ತಿ ಪುರಸ್ಕೃತರು: ಕೋಲಾರದ ನೇತಾಜಿ ಕಬ್‌ಬ್ಯಾಕ್‌ನ ಶ್ರೇಯಸ್, ಡಿಂಡೋ ಪ್ಲಾಕ್‌ನ ಬುಲ್‌ಬುಲ್ ಆದ ಸುಪ್ರಿಯ ಮತ್ತು ಬಂಗಾರಪೇಟೆ ತಾಲೂಕಿನ ಭುವನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಮಂಜುನಾಥ್, ಧನಶೇಖರ್, ಮುರಳಿ, ಚೈತ್ರ, ಭವ್ಯ, ಕಾವ್ಯ, ಸುಪ್ರಿಯ ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕರಿಸಿದರು.
ಸ್ಕೌಟ್ಸ್ ಶಿಕ್ಷಕರಾದ ನಂಜುಂಡಪ್ಪ, ಲಕ್ಷ್ಮಮ್ಮ, ನಾರಾಯಣಸ್ವಾಮಿ ಹಾಗೂ ಜಿಲ್ಲಾ ಸಂಘಟಕ ವಿ.ಬಾಬು ಈ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಿದ್ದರು. ರಾಜ್ಯ ಪುರಸ್ಕಾರ ಪ್ರಶಸ್ತಿ ಸ್ವೀಕರಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾ ಸಂಸ್ಥೆಯ ಜಿಲ್ಲಾ ಮುಖ್ಯ ಆಯುಕ್ತ ಕೆ.ವಿ. ಶಂಕರಪ್ಪ, ಜಿಲ್ಲಾ ಕಾರ್ಯದರ್ಸಿ ಎಂ.ವಿ. ಜನಾರ್ದನ್, ಜಿಲ್ಲಾ ಗೈಡ್ಸ್ ಆಯುಕ್ತೆ ಕೆ.ಆರ್. ಜಯಶ್ರೀ, ಜಿಲ್ಲಾ ಸ್ಕೌಟ್ ಆಯುಕ್ತ ಚಾಂದ್ ಪಾಷಾ ಶುಭ ಹಾರೈಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement