ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಡಾ. ಮಾಸ್ತಿ ಹೆಸರಲ್ಲಿ ಸಂಶೋಧನಾ ಕೇಂದ್ರ ಬೇಕು

Rashmi Kasaragodu
Updated On : 13 Jun 2014, 2:16 am

ಕೋಲಾರ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಮಾಸ್ತಿ ವೆಂಕಟೇಶ ಅಯ್ಯಂಗಾರ್ ದೇಶ ಕಂಡ ಅದ್ಭುತ ಕಥೆಗಾರ ಎಂದು ಮುಖ್ಯೋಪಾಧ್ಯಾಯ ಬಿ.ವಿ. ದೇವರಾಜ್ ಅಭಿಪ್ರಾಯಪಟ್ಟರು.
ತಾಲೂಕಿನ ಮಟ್ನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಾಸ್ತಿ ಒಂದು ನೆನಪು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಮಾಸ್ತಿಯವರು ಸಣ್ಣ ಕಥೆಗಳ ಮೂಲಕ ಲೇಖಕರಾಗಿ, ಕಾದಂಬರಿಕಾರರಾಗಿ ಹೊರಹೊಮ್ಮಿದವರು. ವಿಶೇಷ ಕಾದಂಬರಿಯ ಮೂಲಕ ಜ್ಞಾನಪೀಠ ಪ್ರಶಸ್ತಿಯನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದವರು ಎಂದರು. ಗಾಯಕ ಹಾಗೂ ಕವಿ ಶರಣಪ್ಪ ಗಬ್ಬೂರ ತಿಳಿಸುವುದರ ಜೊತೆಗೆ ಹಾಡುಗಳನ್ನು ಹಾಡುವ ಮೂಲಕ ವಿದ್ಯಾರ್ಥಿಗಳನ್ನು ರಂಜಿಸಿದರು.  ವೇದಿಕೆಯಲ್ಲಿ ಶ್ರೀನಿವಾಸಪುರದ ಸಿರಿಗನ್ನಡ ವೇದಿಕೆಯ ಅಧ್ಯಕ್ಷ ಹಾಗೂ ಲೇಖಕ ಗಾಂಡ್ಲಹಳ್ಳಿ ರಮೇಶ್‌ಬಾಬು ಇದ್ದರು.


ಅಕ್ರಮ ಬಂದೂಕು: ವ್ಯಕ್ತಿ ಸೆರೆ
ಕೆಜಿಎಫ್: ಅಕ್ರಮವಾಗಿ ಬಂದೂಕು ಹೊಂದಿದ್ದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಬೇತಮಂಗಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂದೂಕು ಹಿಡಿದು ಓಡಾಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಡಿಸಿಆರ್‌ಬಿ ಪೊಲೀಸ್ ಇನ್ಸ್‌ಪೆಕ್ಟರ್ ಜಗದೀಶ್ ನೇತೃತ್ವದಲ್ಲಿ ಬೇತಮಂಗಲ ಪೊಲೀಸರು ದೊಡ್ಡಕಾರಿ ಗ್ರಾಮದ ಬಳಿ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದು ಬಂದೂಕಿಗೆ ಪರವಾನಗಿ ಇಲ್ಲವಾದ್ದರಿಂದ ನಾಗರಾಜ್‌ನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement