ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ದೃಶ್ಯ ಮಾಧ್ಯಮಗಳಿಂದ ದುಷ್ಪರಿಣಾಮ

Rashmi Kasaragodu
Updated On : 13 Jun 2014, 2:18 am

ಚಿಂತಾಮಣಿ: ಇತ್ತೀಚಿನ ದಿನಗಳಲ್ಲಿ ದೃಶ್ಯ ಮಾಧ್ಯಮಗಳು ಅಪರಾಧ ಪ್ರಕರಣಗಳನ್ನು ವೈಭವೀಕರಿಸಿ ಪ್ರಸಾರ ಮಾಡುತ್ತಿವೆ. ಇದು ಮಕ್ಕಳ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಜೆಎಂಎಫ್ ಕೋರ್ಟ್‌ನ ಹಿರಿಯ ನ್ಯಾಯಾಧೀಶ ಎಸ್.ಜಿ.ಸಲಗರೆ ಅಭಿಪ್ರಾಯಪಟ್ಟರು.
ನಗರದ ಟ್ಯಾಂಕ್ ಬಂಡ್ ರಸ್ತೆಯ ಶಿಲ್ಪ ವಿದ್ಯಾಸಂಸ್ಥೆ ಆವರಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘ, ಕಂದಾಯ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ, ತಾಪಂ, ಪೋಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಅವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲ ಕಾರ್ಮಿಕರ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಿರಿಯ ವಕೀಲ ಜಿ.ಎಂ.ಇಬ್ರಾಹಿಂ ಸಂವಿಧಾನದ ಅಡಿಯಲ್ಲಿ ಮೂಲಭೂತ ಕರ್ತವ್ಯಗಳ ಬಗ್ಗೆ  ಪ್ರಾಸ್ತಾವಿಕ ನುಡಿಗಳನ್ನು ನುಡಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ಶೀಲಾ, ತಹಸೀಲ್ದಾರ್ ಜಿ.ವಿ.ಹನುಮಂತರೆಡ್ಡಿ, ಎಸ್.ಬಿ.ರೆಹಮಾನ್, ಕೃಷ್ಣಮೂರ್ತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಜಾಥಾ:  ವಿಶ್ವ ಬಾಲ ಕಾರ್ಮಿಕರ ಪದ್ಧತಿ ವಿರೋಧಿ ದಿನಾಚರಣೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜಾಥಾ ಕಾರ್ಯಕ್ರಮಕ್ಕೆ ತಹಸೀಲ್ದಾರ್ ಜಿ.ವಿ.ಹನುಮಂತರೆಡ್ಡಿ ಚಾಲನೆ ನೀಡಿದರು. ನಗರದ ಪ್ರವಾಸಿ ಮಂದಿರದ ಮುಂಭಾಗದಲ್ಲಿ ಗುರುವಾರ ಬೆಳಿಗ್ಗೆ ನಗರ ವ್ಯಾಪ್ತಿಯ ವಿವಿಧ ಶಾಲಾ ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಜಾಗೃತಿ ಮೂಡಿಸಿದರು.
ಸರ್ವರಿಗೂ ಶಿಕ್ಷಣ ಎಂಬ ಧ್ಯೇಯದೊಂದಿಗೆ ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ, ಬಿಇಒ ಕೆ.ಜಿ.ರಂಗಯ್ಯ, ಸಿಪಿಐ ನಂಜಪ್ಪ, ಇಸಿಒ ಕೃಷ್ಣಮೂರ್ತಿ, ಕಾರ್ಮಿಕ ಇಲಾಖೆಯ ಉಪ ನಿರೀಕ್ಷಕ ನೇತ್ರಪಾಲ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement