ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಲಿ: ಎ.ಎಸ್. ಬೆಳ್ಳುಂಕೆ

Rashmi Kasaragodu
Updated On : 13 Jun 2014, 2:18 am

ಚಿಕ್ಕಬಳ್ಳಾಪುರ: ಬಾಲಕಾರ್ಮಿಕ ಪದ್ಧತಿ ಒಂದು ಪಿಡುಗಾಗಿದ್ದು, ಇದನ್ನು ಬೇರು ಸಹಿತ ಕಿತ್ತೊಗೆಬೇಕೆಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎ.ಎಸ್. ಬೆಳ್ಳುಂಕೆ ಹೇಳಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾನೂನು ಕಾರ್ಯಾಗಾರದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡುತ್ತಿದ್ದರು.
ಬಡತನದ ಬೇಗೆಯಲ್ಲಿ ನರಳುತ್ತಿರುವ ಕುಟುಂಬದ ತಂದೆ ತಾಯಿಗಳು ಜೀವನ ನಿರ್ವಹಣೆಯ ದೃಷ್ಟಿಯಿಂದ ಅನಿವಾರ್ಯವಾಗಿ ಮಕ್ಕಳನ್ನು ದುಡಿಮೆಗೆ ಕಳುಹಿಸುತ್ತಾರೆ. ಈ ಮಕ್ಕಳ ಅಸಹಾಯಕ ಪರಿಸ್ಥಿತಿಯನ್ನು ದುರುಪಯೋಗ ಪಡಿಸಿಕೊಳ್ಳುವ ಮಾಲೀಕರು ಕಡಿಮೆ ವೇತನ ನೀಡಿ ಹೆಚ್ಚು ಲಾಭಗಳಿಸುತ್ತಾರೆ. ಪ್ರತಿಭಟಿಸುವ ಶಕ್ತಿಯಿಲ್ಲದ ಬಾಲಕಾರ್ಮಿಕ ವರ್ಗವು ನಿರಂತರ ಶೋಷಣೆಗೊಳಗಾಗುತ್ತಿದೆ ಎಂದರು.
ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರೊ.ಜಿ.ಸುಧಾ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಜಿಲ್ಲಾಧಿಕಾರಿ ಡಾ.ಆರ್ . ವಿಶಾಲ್ ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ಕೆ.ಎಚ್ .ತಮ್ಮೇಗೌಡ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಪ್ರಮಾಣವಚನ ಬೋಧಿಸಿದರು. ಕಾರ್ಯಕ್ರಮದ ಜಿಲ್ಲಾ ಪಂಚಾಯತ್  ಕಾರ್ಯ ನಿರ್ವಹಣಾಧಿಕಾರಿ ನೀಲಾ ಮಂಜುನಾಥ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯ ಗೋಪಿನಾಥ್ , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಎಸ್. ಶೋಭಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಅಜಿತ್  ಪ್ರಸಾದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಸುರೇಖಾ ವಿಜಯಪ್ರಕಾಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ವಿ. ರಂಗಸ್ವಾಮಿ, ಜಿಲ್ಲಾ ಸರ್ಕಾರಿ ವಕೀಲ ಜಿ.ಆರ್ . ಹರಿಕುಮಾರ್, ಎಚ್. ಗೋಪಾಲಗೌಡ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement