ರೈತ ಸಂಘ ಪ್ರತಿಭಟನೆ
ಬಂಗಾರಪೇಟೆ: ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ತಾಲೂಕಿನ 37 ಗ್ರಾಪಂಗಳಲ್ಲಿ ಅವ್ಯವಹಾರ ನಡೆದಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕೆಂದು ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ತಾಪಂ ಕಚೇರಿ ಎದುರು ಪ್ರತಿಭಟಿಸಿದರು. ಪಂಚಾಯ್ತಿಗಳಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಅಧಿಕಾರಿಗಳು ಯೋಜನೆಗಳನ್ನು ರೂಪಿಸಿದ್ದಾರೆ. ಇದನ್ನು ಪರಿಶೀಲಿಸಲು ಬಂದ ಕೇಂದ್ರ ತಂಡ ಕೇವಲ 2 ಪಂಚಾಯಿತಿಗಳ ಕಡತಗಳನ್ನು ಪರಿಶೀಲಿಸಿ, ಎಲ್ಲವೂ ಸರಿಯಾಗಿದೆ ಎಂಬ ವರದಿ ನೀಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆಂದು ಆರೋಪಿಸಿದರು. ಪ್ರತಿಭಟನೆಯ ನೇತೃತ್ವವನ್ನು ತಿಮ್ಮಾಪುರ ನಾಗರಾಜ್, ತೊರಗನದೊಡ್ಡಿ, ಮಂಜುನಾಥ್, ಶ್ರೀನಿವಾಸ್, ಉದಯಕುಮಾ, ಸೀನಪ್ಪ, ಅಮರೇಶ್, ನಾರಾಯಣಸ್ವಾಮಿ, ರಾಘವೇಂದ್ರ, ಬಿ.ನಾಗರಾಜ್, ಜಗದೀಶ್.ಎಂ., ಸತೀಶ್, ಜಯರಾಮ್, ವೆಂಕಟೇಶ್‌ಗೌಡ, ವೆಂಕಟರಾಘವ ಇದ್ದರು.