ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಆಂಜಿನಪ್ಪ ಆರೋಪಗಳೆಲ್ಲ ಸುಳ್ಳು

Mainashree
Updated On : 17 Jun 2014, 11:44 am

ಚಿಕ್ಕಬಳ್ಳಾಪುರ: ತಮ್ಮ ವಿರುದ್ಧ ಜಿಲ್ಲಾ ಕಾಂಗ್ರೆಸ್  ಅಧ್ಯಕ್ಷ ಎಂ. ಆಂಜಿನಪ್ಪ ಮಾಡಿರುವ ಆರೋಪಗಳೆಲ್ಲಾ ಸುಳ್ಳು.ಅವರು ವಿಧಾನಪರಿಷತ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಹತಾಶ ಭಾವನೆಯಿಂದ ಆ ರೀತಿ ಹೇಳಿದ್ದಾರೆ ಎಂದು ಸಂಸದ ಎಂ. ವೀರಪ್ಪ ಮೊಯ್ಲಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತಮ್ಮ ಕ್ಷೇತ್ರಾಭಿವೃದ್ಧಿ ನಿಧಿ ಬಳಕೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಆಂಜಿನಪ್ಪ ಹೇಳಿಕೆಗೆ ತಿರುಗೇಟು ನೀಡಿದರು. ಆಂಜಿನಪ್ಪ ವಿಧಾನಪರಿಷತ್  ಸದಸ್ಯರಾಗಿ ಆಯ್ಕೆಯಾಗಲು ಟಿಕೆಟ್ ಬಯಸಿದ್ದರು. ಆದರೆ, ಅವರಿಗೆ ಸಿಗಲಿಲ್ಲ. ಇದರಿಂದ ಹತಾಶ ಮನೋಭಾವನೆಯಿಂದ ಸುಳ್ಳು ಆರೋಪವನ್ನು ಮಾಡಿದ್ದಾರೆ. ಅವರ ಬಗ್ಗೆ ತಮಗೆ ಇನ್ನೂ ಕನಿಕರವಿದೆ ಎಂದು ಹೇಳಿದರು. ಉಳಿದಂತೆ ಇದರ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ ಎಂದು ಹೇಳಿದರು. ವೀರಪ್ಪ ಮೊಯ್ಲಿಗೆ ಲೋಕಸಭಾ ಚುನಾವಣೆಗೆ ಪಕ್ಷದ ಟಿಕೆಟ್ ಕೊಡಿಸಿದ್ದು ರಿಲಯನ್ಸ್ ಕಂಪನಿಯ ಅನಿಲ್  ಅಂಬಾನಿ. ಸಚಿವರಾಗಿದ್ದಾಗ ಮೊಯ್ಲಿ ಆ ಕಂಪನಿಗೆ ಅನುಕೂಲ ಮಾಡಿಕೊಟ್ಟು, ದೇಶಕ್ಕೆ ಕೋಟ್ಯಂತರ ರು. ನಷ್ಟವನ್ನುಂಟು ಮಾಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆಂಜಿನಪ್ಪ ಆರೋಪಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement