ಆದೇಶ ಹಿಂಪಡೆಯಲು ಆಗ್ರಹಿಸಿ ಮನವಿ
ಶಿಡ್ಲಘಟ್ಟ: ರೇಷ್ಮೆಯಿಂದಲೇ ಜೀವನ ನಡೆಸುತ್ತಿರುವ ಸಾವಿರಾರು ಕುಟುಂಬಗಳು ಸರ್ಕಾರದ ನಿರ್ಧಾರದಿಂದ ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಸಂಸದ ಕೆ.ಎಚ್. ಮುನಿಯಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ. ಪಟ್ಟಣದ ತಾಲೂಕು ಕಚೇರಿಯಲ್ಲಿ ಮನವಿ ಸಲ್ಲಿಸಿದ ರೈತರು, ರೈತರು ಹಾಗೂ ರೀಲರುಗಳ ವಿರೋಧದ ನಡುವೆಯೂ ರೇಷ್ಮೆ ಇಲಾಖೆಯನ್ನು ಕೃಷಿ ಇಲಾಖೆಯೊಂದಿಗೆ ವಿಲೀನಗೊಳಿಸುವ ಆದೇಶ ಹೊರಡಿಸಿರುವುದು ಶೋಚನೀಯವಾಗಿದ್ದು, ಸರ್ಕಾರ ಕೂಡಲೇ ಆದೇಶ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಜಿಪಂ ಸದಸ್ಯ ಎಸ್.ಎಂ. ನಾರಾಯಣಸ್ವಾಮಿ, ಎ. ರಾಮಚಂದ್ರಪ್ಪ, ಬೈರೇಗೌಡ, ಆಂಜನೇಯರೆಡ್ಡಿ, ಮುನಿನಂಜಪ್ಪ, ಟಿ.ವಿ. ಕೃಷ್ಣಪ್ಪ, ವೀರಾಪುರ ಮುನಿರೆಡ್ಡಿ ಇದ್ದರು.