ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ನಿಧಿ ಬಳಕೆ ಪರಿಶೀಲಿಸಿದ ಮೊಯ್ಲಿ

Mainashree
Updated On : 17 Jun 2014, 11:44 am

ಚಿಕ್ಕಬಳ್ಳಾಪುರ: ಸಂಸದ ವೀರಪ್ಪ ಮೊಯ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತಮ್ಮ ಕ್ಷೇತ್ರಾಭಿವೃದ್ಧಿ ನಿಧಿ ಬಳಕೆ ಮತ್ತು ಅದರಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಲ್ಲಿ ಸಾಧಿಸಿರುವ ಪ್ರಗತಿಯ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.  ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ತ್ವರಿತ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು. ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಹೈಟೆಕ್ ಗ್ರಂಥಾಲಯವನ್ನು  ನಿರ್ಮಿಸುತ್ತಿದ್ದು, ಇದಕ್ಕೆ ಇನ್ನೂ ಅಗತ್ಯವಿರುವ ಆರ್ಥಿಕ ನೆರವನ್ನು ನೀಡಲಾಗುವುದು ಎಂದರು. ಜಿಲ್ಲಾ ಕೇಂದ್ರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಂಬಂಧಿಸಿದಂತೆ ಪ್ರಸ್ತಾಪಿಸಿದ ಜಿಲ್ಲಾಧಿಕಾರಿ ಡಾ. ಆರ್.ವಿಶಾಲ್, ಈಗಾಗಲೇ 18 ವರೆ ಎಕರೆ ಭೂಮಿ ಲಭ್ಯವಿದ್ದು, ಇನ್ನೂ ಅಗತ್ಯವಿರುವ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದೆಂದರು. ಈ ವೇಳೆ, ಡೆಪ್ಯೂಟಿ ಸ್ಪೀಕರ್ ಎನ್.ಎಚ್.ಶಿವಶಂಕರ ರೆಡ್ಡಿ, ಶಾಸಕರಾದ ಡಾ.ಕೆ.ಸುಧಾಕರ್, ಎಸ್.ಎನ್.ಸುಬ್ಬಾರೆಡ್ಡಿ, ಜಿಪಂ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ, ಸಿಇಒ ನೀಲಾ ಮಂಜುನಾಥ್ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement