ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಪ್ರಧಾನಿಗೆ 10 ಸಾವಿರ ಪತ್ರ!

Mainashree
Updated On : 17 Jun 2014, 11:39 am

ಕೆಜಿಎಫ್: ಬಿಜಿಎಂಎಲ್ ಚಿನ್ನದ ಗಣಿ ಕಾರ್ಮಿಕ ಕಾಲೋನಿಗಳಲ್ಲಿ ವಾಸಿಸುತ್ತಿರುವ ಕಾರ್ಮಿಕ ಕುಟುಂಬ ವರ್ಗದ ಮನೆಗಳನ್ನು ಖಾಲಿ ಮಾಡಬೇಕು ಎಂದು ಬಿಜಿಎಂಎಲ್ ಆಡಳಿತ ಮಂಡಳಿ ನೋಟಿಸ್ ಜಾರಿ ಮಾಡಬಾರದು. ಕಾರ್ಮಿಕರಿಗೆ ಮನೆಗಳನ್ನು ಸ್ವಂತ ಮಾಡಬೇಕು ಎಂದು ಆಗ್ರಹಿಸಿ ಚಿನ್ನದ ಗಣಿ ಕಾರ್ಮಿಕರ ಒಕ್ಕೂಟ ಸಂಘದ ಅಧ್ಯಕ್ಷ ಸಂಪತ್‌ಕುಮಾರ್ ಅವರ ನೇತೃತ್ವದಲ್ಲಿ ನೂರಾರು ಕಾರ್ಮಿಕರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
10 ಸಾವಿರ ಕಾರ್ಮಿಕರು ಹಾಗೂ ಕಾರ್ಮಿಕ ಕುಟುಂಬ ವರ್ಗದ ಸದಸ್ಯರು ಪತ್ರ ಬರೆದು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಅಂಚೆ ಪೆಟ್ಟಿಗೆಯಲ್ಲಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಗಣಿ ಆಡಳಿತ ಮಂಡಳಿ ಈಗಾಗಲೇ ವ್ಯಾಪಾರ, ಶಿಕ್ಷಣ ಸಂಸ್ಥೆ, ಖಾಸಗಿ ಆಸ್ಪತ್ರೆ ಸೇರಿದಂತೆ ದೇವಾಲಯಗಳಿಗೆ ಖಾಲಿ ಮಾಡುವಂತೆ ನೋಟಿಸ್ ಜಾರಿ ಮಾಡಿದೆ. ಮುಂದಿನ ಹಂತದಲ್ಲಿ ಕಾರ್ಮಿಕರ ಮನೆಗಳನ್ನು ಖಾಲಿ ಮಾಡಬೇಕು ಎಂದು ನೋಟಿಸ್ ಜಾರಿ ಮಾಡಲಿದೆ. ಆದ್ದರಿಂದ ತಾವುಗಳು ಚಿನ್ನದ ಗಣಿ ಸಮಸ್ಯೆ ಹಾಗೂ ಕಾರ್ಮಿಕರ ಮುಂದಿನ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಯಾವುದೇ ಕಾರಣಕ್ಕೂ ಕಾರ್ಮಿಕರ ಮನೆಗಳನ್ನು ಖಾಲಿ ಮಾಡಿಸಬಾರದು. ಅಲ್ಲದೆ, ಇತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement