ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಬೋಗಸ್ ಮತದಾರರ ವಿರುದ್ಧ ಕ್ರಮಕ್ಕೆ ಆಗ್ರಹ

Mainashree
Updated On : 17 Jun 2014, 11:45 am

ಚಿಂತಾಮಣಿ: ಪದವೀದರ ಬೋಗಸ್ ಮತದಾರರನ್ನು ಪತ್ತೆಹಚ್ಚಿ ಪೊಲೀಸರ ವಶಕ್ಕೆ ನೀಡಲು ಸಿದ್ಧರಿರುವುದಾಗಿ ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಹೇಳಿದರು.
ನಗರದ ವಿಜಯಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ಆಗ್ನೇಯ ಪದವೀದರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಶಿವಯೋಗಿಸ್ವಾವು ಪರ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿ, ತಾಲೂಕಿನ ವ್ಯಾಪ್ತಿಯಲ್ಲಿ ಸಾವಿರಕ್ಕೂ ಹೆಚ್ಚು ಬೋಗಸ್ ಮತದಾರರಿದ್ದು,ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕ್ರಿಮಿನಲ್ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಲು ಚುನಾವಣಾ ಅಧಿಕಾರಿಗಳಿಗೆ ಹಾಗೂ ಪೊಲೀಸರಿಗೆ ದೂರು ನೀಡುವುದಾಗಿ ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್. ವೀರಯ್ಯ ಮಾತನಾಡಿ, ದೇಶದಲ್ಲಿ ನರೇಂದ್ರಮೋದಿ ಅಲೆಯಿಂದ ಪಕ್ಷ ಬಹುಮತ ಪಡೆದಿದೆ. ಮೋದಿ ಅಲೆಯಿಂದ ಆಗ್ನೇಯ ಪದವೀದರರ ಕ್ಷೇತ್ರದ ಅಭ್ಯರ್ಥಿ ಡಾ. ಶಿವಯೋಗಿಸ್ವಾವು 3 ನೇ ಬಾರಿಗೆ ಹ್ಯಾಟ್ರಿಕ್ ಸಾಧಿಸುವುದು ಖಚಿತ ಎಂದು ಭವಿಷ್ಯ ನುಡಿದರು.  ವಿವಿಧ ಶಾಲಾ ಕಾಲೇಜುಗಳೀಗೆ ಬೈಕ್ ರ್ಯಾಲಿ ಮೂಲಕ ಸಂಚರಿಸಿ ಮತ ಯಾಚನೆ ಮಾಡಿದರು. ರಾಜ್ಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ತಳಗವಾರ ಪ್ರತಾಫ್, ತಾಲೂಕು ಅಧ್ಯಕ್ಷ ರಾಜಾರೆಡ್ಡಿ, ನಗರ ಅಧ್ಯಕ್ಷ ಸೂರ್ಯಪ್ರಕಾಶ್ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement