ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ತುರುಸಿನ ಸ್ಪರ್ಧೆ

Mainashree
Updated On : 19 Jun 2014, 11:28 am

ಕೋಲಾರ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಹ್ಯಾಟ್ರಿಕ್‌ಬಯಸಿ ಬಿಜೆಪಿಯ ಡಾ.ಶಿವಯೋಗಿಸ್ವಾವು ಪ್ರಬಲ ಹೋರಾಟ ನಡೆಸಿದರೆ, ಕಾಂಗ್ರೆಸ್‌ನ ಪ್ರೊ.ಮುರುಗೇಂದ್ರಪ್ಪ, ಜೆಡಿಎಸ್‌ನಿಂದ ಶ್ರೀನಿವಾಸಪುರ ತಾಲೂಕಿನ ತೂಪಲ್ಲಿ ಆರ್. ಚೌಡಾರಡ್ಡಿ 12 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಎರಡು ಬಾರಿ ಆಯ್ಕೆಯಾಗಿದ್ದ ಶಿವಯೋಗಿ ಸ್ವಾಮಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ  ವಿಧಾನಪರಿಷತ್ತಿನ ಮುಖ್ಯ ಸಚೇತಕರಾಗಿ ಕಾರ್ಯನಿರ್ವಹಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿದ್ದ ನಿವೃತ್ತ ಕೆಎಎಸ್ ಅಧಿಕಾರಿ ಎಂ.ಎಸ್.ನಾಗೇಂದ್ರ ನಾಯಕ ಒತ್ತಡಕ್ಕೆ ಮಣಿದು ನಾಮಪತ್ರ ವಾಪಸ್ ಪಡೆದಿದ್ದು ಬಿಜೆಪಿಗೆ ಬಲಬಂದಂತಾಗಿದೆ. ಜೆಡಿಎಸ್ ಅಭ್ಯರ್ಥಿ ಚೌಡರೆಡ್ಡಿ ಸತತವಾಗಿ ಎರಡು ಬಾರಿ ಚುನಾವಣೆಯಲ್ಲಿ ಸೋತು ಮೂರನೇ ಬಾರಿ ಸ್ಪರ್ಧಿಸಿದ್ದಾರೆ. ಸೋತ ನಂತರ ಚೌಡರೆಡ್ಡಿ ಕ್ಷೇತ್ರದತ್ತ ಮುಖ ಮಾಡಿಲ್ಲವೆಂಬ ಆರೋಪದ ನಡುವೆಯೂ ಚೌಡರೆಡ್ಡಿ ಮತ್ತೆ ಸ್ಪರ್ಧಿಸಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಗೆಲವಿನ ತಂತ್ರ ಹೆಣೆದಿದ್ದಾರೆ. ಇನ್ನೂ ಕಾಂಗ್ರೆಸ್‌ನ ಮುರೇಗೇಂದ್ರಪ್ಪ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಜಯ ಸಾಧಿಸಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement