ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ವಿಲೀನ ಕೈ ಬಿಡುವ ಭರವಸೆ: ರೈತರ ಹರ್ಷ

Mainashree
Updated On : 19 Jun 2014, 11:28 am

ಚಿಕ್ಕಬಳ್ಳಾಪುರ: ಅಧಿಕಾರಿಗಳ ತಪ್ಪು ಮಾಹಿತಿಯಿಂದ ಕೃಷಿ ಇಲಾಖೆಯೊಂದಿಗೆ ರೇಷ್ಮೆ ಇಲಾಖೆಯನ್ನು ವಿಲೀನಗೊಳಿಸುವ ಪ್ರಕ್ರಿಯೆ ಚಿಂತನೆ ನಡೆಸಿದ್ದು, ಇದು ತಮ್ಮ ಗಮನಕ್ಕೆ ಬಂದಿಲ್ಲ. ತಾವು ಎಂದಿಗೂ ರೈತರಿಗೆ ಅನ್ಯಾಯವಾಗುವ ನಿರ್ಧಾರವನ್ನು ಕೈಗೊಳ್ಳುವುದಿಲ್ಲ. ರೇಷ್ಮೆ ಇಲಾಖೆಯನ್ನು ಕೃಷಿ ಇಲಾಖೆಯೊಂದಿಗೆ ವಿಲೀನಗೊಳಿಸುವ ಪ್ರಮೇಯವೇ ಇಲ್ಲ. ಈ ಬಗ್ಗೆ ಯಾವುದೇ ಅನುಮಾನಪಡಬೇಡಿ ಎಂಬ ಭರವಸೆಯನ್ನು ಮುಖ್ಯಮಂತ್ರಿಗಳು ಕೊಟ್ಟಿದ್ದಾರೆ ಎಂದು ರೇಷ್ಮೆ ಮಂಡಳಿ ಸದಸ್ಯ ಯಲುವಹಳ್ಳಿ ರಮೇಶ್ ತಿಳಿಸಿದ್ದಾರೆ.
ಕೃಷಿ ಇಲಾಖೆಯೊಂದಿಗೆ ರೇಷ್ಮೆ ಇಲಾಖೆಯನ್ನು ವಿಲೀನಗೊಳಿಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ರೈತ ಮುಖಂಡ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಗುರುವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು. ಮನವಿ ಪತ್ರವನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು, ರೇಷ್ಮೆ ಇಲಾಖೆಯನ್ನು ನಂಬಿ ಅನೇಕ ಮಂದಿ ರೈತರು ಜೀವನ ನಡೆಸುತ್ತಿದ್ದಾರೆ.ಗುವುದು. ವಿಲೀನ ಪ್ರಕ್ರಿಯೆಗೆ ಅವಕಾಶ ನೀಡುವುದಿಲ್ಲ ಎಂಬ ಭರವಸೆ ನೀಡಿದರು ಎಂದು ತಿಳಿಸಿದ್ದಾರೆ. ನಿಯೋಗದಲ್ಲಿ ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷ ಬಿಸ್ಸೇಗೌಡ, ಜಿ.ಪಂ. ಸದಸ್ಯ ನಾರಾಯಣಸ್ವಾಮಿ, ಮಳ್ಳೂರು ಶಿವಣ್ಣ ಯಲುವಹಳ್ಳಿ ಸೊಣ್ಣೇಗೌಡ, ಭೈರೇಗೌಡ, ಮಳ್ಳೂರು ಹರೀಶ್ ಮುಂತಾದವರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement