ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಶಾಲಾ ಶುಲ್ಕ ಮಾಹಿತಿ ನಿರಾಕರಣೆ: ಪ್ರತಿಭಟನೆ

Mainashree
Updated On : 19 Jun 2014, 11:28 am

ಕೆಜಿಎಫ್: ಕ್ಷೇತ್ರದ ಶೈಕ್ಷಣಿಕ ವಲಯದ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆ ಸೇರಿದಂತೆ ಇತರೆ ಖಾಸಗಿ ಶಾಲೆಗಳಲ್ಲಿ ಮಕ್ಕಳಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಾಹಿತಿ ನೀಡಲು ನಿರಾಕರಿಸಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಧೋರಣೆಯನ್ನು ಖಂಡಿಸಿ ಜಯಕರ್ನಾಟಕ ಸಂಘಟನೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಿತು.
 ಕ್ಷೇತ್ರದಲ್ಲಿ ದಲಿತರು ಹಾಗೂ ಹಿಂದುಳಿದ ವರ್ಗದವರೇ ಹೆಚ್ಚಾಗಿದ್ದು ಅದರಲ್ಲಿ ಚಿನ್ನದ ಗಣಿಗಳ ಮುಚ್ಚಿದ ನಂತರ ಕಾರ್ಮಿಕರ ಕುಟುಂಬಗಳು ಸಂಕಷ್ಟದ ಜೀವನ ನಡೆಸುತ್ತಿವೆ. ಪರಿಸ್ಥಿತಿಯಲ್ಲಿ ಅನುದಾನ ಹಾಗೂ ಅನುದಾನರಹಿತ ಮತ್ತು ಖಾಸಗಿ ಶಾಲೆಗಳಲ್ಲಿ ಡೊನೇಶನ್ ಹಾವಳಿ ಹೆಚ್ಚಾಗಿದೆ.
 ಆದರೆ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿ ಈ ಬಗ್ಗೆ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿ ಅವರ ವಿರುದ್ದ ಘೋಷಣೆ ಕೂಗಿದರು.
ಸರ್ಕಾರಕ್ಕೆ ಹಾಗೂ ಶಿಕ್ಷಣ ಸಚಿವರಿಗೆ ಮನವಿ ಪತ್ರವನ್ನು ರಾಬರ್ಟ್‌ಸನ್‌ಪೇಟೆ ಠಾಣಾ ಪಿಎಸ್‌ಐ ರಂಗಶಾಮಯ್ಯ ಮೂಲಕ ಸಲ್ಲಿಸಿದರು.
 ಪ್ರತಿಭಟನೆಯಲ್ಲಿ ಜಯಕರ್ನಾಟಕ ಸಂಘಟನೆಯ ಅಧ್ಯಕ್ಷ ಪೂಂಡಿರಾಜ್, ಕಾರ್ಯದರ್ಶಿ ಸೈಯದ್ ಅಲ್ಲಾ ಭಕ್ಷ್, ಪದಾಧಿಕಾರಿಗಳಾದ  ಕೆ.ವಿ. ರಾಜಣ್ಣ, ಎನ್. ಬಾಬು, ಕಾಣಿಕ್‌ರಾಜ್, ಆರೋಗ್ಯಸ್ವಾಮಿ, ಗಜೇಂದ್ರಕುಮಾರ್, ಜಾವೀದ್ ಪಾಷಾ, ಶ್ರೀಧರ್, ನಟರಾಜನ್, ಚಂದ್ರಾಚಾರಿ, ಶಂಕರಾಚಾರಿ ಶಫಿ ಅಹ್ಮದ್ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement