ತಂಗುದಾಣ ರಕ್ಷಿಸಲು ಒತ್ತಾಯ
ಬಂಗಾರಪೇಟೆ: ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲೆಡೆ ತಂಗುದಾಣಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಆದರೆ ಪಟ್ಟಣದಲ್ಲಿ ಇರುವ ತಂಗುದಾಣವನ್ನು ಕೆಡವಲು ಕೆಲವು ವ್ಯಕ್ತಿಗಳು ಪ್ರಯತ್ನಿಸುತ್ತಿದ್ದಾರೆ.
ಪಟ್ಟಣದ ಕೋಲಾರ ಮುಖ್ಯರಸ್ತೆಯಲ್ಲಿರುವ ತಾಲೂಕು ಪಂಚಾಯಿತಿ ಕಚೇರಿ ಪಕ್ಕದಲ್ಲಿರುವ ಸಾರ್ವಜನಿಕ ಬಸ್ಸು ತಂಗುದಾನವನ್ನು ಕೆಲವರು ನಾಶಪಡಿಸಿ ನೆಲಸಮ ಮಾಡಲು ಮುಂದಾಗಿದ್ದು ಈಗಾಗಲೇ ತಂಗುದಾಣದ ಚಾವಣಿಯ ಅರ್ಧ ಭಾಗ ಕುಸಿದಿದೆ. ತಕ್ಷಣ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳಬೇಕು. ಹಲವು ದಶಕಗಳಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಮಳೆ, ಗಾಳಿ, ಬಿಸಿಲಿನಿಂದ ರಕ್ಷಣೆ ನೀಡುತ್ತಿದ್ದ ಈ ತಂಗುದಾಣ ಸ್ಥಳವನ್ನು ಖಾಸಗಿ ವ್ಯಕ್ತಿಯೊಬ್ಬರು ಕಾಂಪ್ಲೆಕ್ಸ್ ನಿರ್ಮಾಣಕ್ಕಾಗಿ ಅತಿಕ್ರಮಣ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಸಂಬಂಧಪಟ್ಟವರು ಕೂಡಲೇ ಕ್ರಮ ಕೈಗೊಂಡು ಸಾರ್ವಜನಿಕ ಆಸ್ತಿಯನ್ನು ರಕ್ಷಿಸಲಿ.